ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಸಂಜೆ ವೇಳೆಗೆ ಬಿರುಗಾಳಿ ಸಹಿತ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಚಾಮರಾಜನಗರ, ರಾಮನಗರದಲ್ಲಿ ಭಾರೀ ಮಳೆ ಮುನ್ಸೂಚನೆಯಿದ್ದು, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಮೋಡಕವಿದ ವಾತಾವರಣವಿದ್ದು, ಬನಶಂಕರಿ, ಲಾಲ್ಬಾಗ್, ಜೆಪಿನಗರ, ಜಯನಗರ ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಮಳೆಯಾಗಿದೆ. ಎಚ್ಎಎಲ್ನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 38.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇದನ್ನೂ ಓದಿ : ಬೆಂಗಳೂರು : ಕೌಟುಂಬಿಕ ಕಲಹ ಶಂಕೆ – ಪತಿಯಿಂದಲೇ ಪತ್ನಿಯ ಭೀಕರ ಕೊ*ಲೆ..!
Post Views: 703