ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗ್ಬೇಕು ಅನ್ನೋದಕ್ಕೆ ಇದೇ ಸಾಕ್ಷಿ – ದರ್ಶನ್​ ಫ್ಯಾನ್ಸ್​ ವಿರುದ್ಧ ನಟಿ ರಮ್ಯಾ ಕಿಡಿ!

ಬೆಂಗಳೂರು : ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತದೆ ಎಂದು ಪೋಸ್ಟ್‌ ಹಂಚಿಕೊಂಡಿದ್ದ ಮೋಹಕ ತಾರೆ ರಮ್ಯಾ ಇದೀಗ ದರ್ಶನ್‌ ಫ್ಯಾನ್ಸ್​ಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ರೇಣುಕಾಸ್ವಾಮಿ ಪ್ರಕರಣ ಸಂಬಂಧ ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿದ ವಿಚಾರವಾಗಿ ಸುಪ್ರೀಂ ಕೋರ್ಟ್ ಅಸಮಾಧಾನ ಹೊರಹಾಕಿತ್ತು. ಈ ಬಗ್ಗೆ ಪ್ರಕಟವಾಗಿರುವ ವರದಿಯೊಂದನ್ನ ಪೋಸ್ಟ್ ಮಾಡಿ ನಟಿ ರಮ್ಯಾ “ಭಾರತದಲ್ಲಿ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್‌ ಭರವಸೆಯ ಬೆಳಕು ಮೂಡಿಸಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ” ಬರೆದುಕೊಂಡಿದ್ದರು.

ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ದರ್ಶನ್ ಅಭಿಮಾನಿಗಳು ರಮ್ಯಾ ಅವರನ್ನು ಟ್ರೋಲ್ ಮಾಡಲು ಆರಂಭಿಸಿದ್ದರು. ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಾಮೆಂಟ್ ಮಾಡಿದ್ದರು. ಇದೀಗ ಈ ಬಗ್ಗೆ ನಟಿ ರಮ್ಯಾ ನೇರವಾಗಿಯೇ ಪ್ರತಿಕ್ರಿಯಿಸಿದ್ದಾರೆ. “ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ-ನನ್ನ ಇನ್‌ಸ್ಟಾಗ್ರಾಮ್‌ಗೆ ಸ್ವಾಗತ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಏಕೆ ಬೇಕು ಎಂಬುದಕ್ಕೆ ನಿಮ್ಮ ಕಾಮೆಂಟ್‌ಗಳೇ ಸಾಕ್ಷಿ” ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಸದ್ಯ ನಟಿ ರಮ್ಯಾ ಇನ್‌ಸ್ಟಾಗ್ರಾಮ್ ಸ್ಟೋರಿ ಕೂಡ ವೈರಲ್ ಆಗುತ್ತಿದೆ. ಅದನ್ನು ಕೂಡ ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಮೊದಲಿನಿಂದಲೂ ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ವಿರುದ್ಧವೇ ನಟಿ ರಮ್ಯಾ ಮಾತನಾಡುತ್ತಾ ಬರ್ತಿದ್ದಾರೆ.

ಇದನ್ನೂ ಓದಿ : ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ 20 ವಾಹನಗಳ ನಡುವೆ ಭೀಕರ ಅಪಘಾತ – ಓರ್ವ ಸಾವು, 20 ಮಂದಿಗೆ ಗಾಯ!

Btv Kannada
Author: Btv Kannada

Read More