Download Our App

Follow us

Home » ಅಪರಾಧ » ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ರೇಪ್​ ಕೇಸ್ ದಾಖಲು..!

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ರೇಪ್​ ಕೇಸ್ ದಾಖಲು..!

ಬೆಂಗಳೂರು : ಪೆನ್‍ಡ್ರೈವ್ ಪ್ರಕರಣ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತಷ್ಟು ಕಾನೂನು ಕಂಟಕ ಶುರುವಾಗಿದೆ. ಪ್ರಜ್ವಲ್​ ವಿರುದ್ಧ ಮತ್ತೊಂದು ರೇಪ್​ ಕೇಸ್ ದಾಖಲಾಗಿದೆ. ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್​ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ದಾಖಲಾದ ಎರಡನೇ ಪ್ರಕರಣವಾಗಿದೆ.

ಐಪಿಸಿ ಸೆಕ್ಷನ್ 376(2)(N), 376(2)(K), 354(A), 354(B), 354(C) 506 ಅಡಿಯಲ್ಲಿ ಪ್ರಜ್ವಲ್​​ ರೇವಣ್ಣ ವಿರುದ್ಧ FIR ದಾಖಲಾಗಿದೆ. ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು, ವಿಡಿಯೋದಲ್ಲಿದ್ದ ಕೆಲ ಮಹಿಳೆಯರನ್ನು ಸಂಪರ್ಕಿಸಿ ದೂರು ನೀಡುವಂತೆ ಹೇಳಿದ್ದರು. ಈ ಪೈಕಿ ಮಹಿಳೆಯೊಬ್ಬರು ಎಸ್​ಐಟಿ ಅಧಿಕಾರಿಗಳ ಬಳಿ ಹೇಳಿಕೆ ನೀಡಿದ್ದಾರೆಂದು ತಿಳಿದುಬಂದಿದೆ.

ಈ ಹೇಳಿಕೆ ಆಧರಿಸಿ ಅಧಿಕಾರಿಗಳು ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪದಡಿ ದಾಖಲಾಗಿದ್ದ ಎಫ್​ಐಆರ್​ಗೆ ಹೊಸದಾಗಿ ಐಪಿಸಿ ಸೆಕ್ಷನ್​​ 376 ಅನ್ನು ಸೇರ್ಪಡೆಗೊಳಿಸುವ ಮೂಲಕ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ‘ಥಗ್ ಲೈಫ್’ ಸಿನಿಮಾಗೆ ಸಿಲಂಬರಸನ್ ಎಂಟ್ರಿ : ಇದು ಕಮಲ್‌-ಮಣಿರತ್ನಂ ಕಾಂಬಿನೇಷನ್‌ ಚಿತ್ರ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here