Download Our App

Follow us

Home » ರಾಜಕೀಯ » ಪ್ರಜ್ವಲ್ ರೇವಣ್ಣ​ ಕೇಸ್​ಗೆ ಬಿಗ್ ಟ್ವಿಸ್ಟ್ – ಪ್ರೀತಂ ಗೌಡ ಆಪ್ತ ಸೇರಿ ಇಬ್ಬರು ಎಸ್‌ಐಟಿ ವಶಕ್ಕೆ..!

ಪ್ರಜ್ವಲ್ ರೇವಣ್ಣ​ ಕೇಸ್​ಗೆ ಬಿಗ್ ಟ್ವಿಸ್ಟ್ – ಪ್ರೀತಂ ಗೌಡ ಆಪ್ತ ಸೇರಿ ಇಬ್ಬರು ಎಸ್‌ಐಟಿ ವಶಕ್ಕೆ..!

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯದಲ್ಲಿ ಹಲ್​ ಚಲ್​ ಸೃಷ್ಟಿಸಿದೆ. ಈ ಪ್ರಕರಣಕ್ಕೆ ಇದೀಗ ಮೇಜರ್​ ಟ್ವಿಸ್ಟ್​ ಸಿಕ್ಕಿದೆ. ವಿಶೇಷ ತನಿಖಾ ಅಧಿಕಾರಿಗಳು (SIT) ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್​ ಮತ್ತು ಚೇತನ್ ಎಂಬಾತನನ್ನು SIT​ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ. 

ಸದ್ಯ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ ತಂಡ ಹಾಸನದಲ್ಲಿ ಬೀಡು ಬಿಟ್ಟಿದೆ. ಈ ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟವರನ್ನು ವಶಕ್ಕೆ ಪಡೆದುಕೊಳ್ಳುತ್ತಿದೆ. ಇದೀಗ ಅಧಿಕಾರಿಗಳು ಚೇತನ್​ ಹಾಗೂ  ಪ್ರೀತಂಗೌಡ ಆಪ್ತ ಲಿಖಿತ್​ನನ್ನು ಪೆನ್ ಡ್ರೈವ್ ಇಟ್ಟುಕೊಂಡಿದ್ದ ಆರೋಪದ ಮೇಲೆ ವಶಕ್ಕೆ ಪಡೆದುಕೊಂಡಿದ್ದಾರೆ. ಲಿಖಿತ್ ಮತ್ತು ಚೇತನ್​ ಪ್ರೀತಂಗೌಡ ಜೊತೆ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ನವೀನ್ ಗೌಡ ಮತ್ತು ಪುಟ್ಟರಾಜು ಎಂಬುವರಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಎಸ್​ಐಟಿ ಅಧಿಕಾರಿಗಳು ಸದ್ಯ ಹಾಸನ ನಗರ ಪೊಲೀಸ್​ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ನಡೆಸುತ್ತಿದ್ದು, ಇದರ ಹಿಂದೆ ಯಾರು ಯಾರು ಇದ್ದಾರೆ ಎಂದು ತನಿಖೆ ನಡೆಸುತ್ತಿದ್ದಾರೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ್​ ವಿಡಿಯೋಗಳು ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದ್ದಂತೆ ಕಳೆದ ತಿಂಗಳು ಏಪ್ರಿಲ್ 23 ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ (SIT) ರಚಿಸಿತು. ಬಳಿಕ ಪ್ರಕರಣ ಎಸ್​ಐಟಿಗೆ ವರ್ಗಾವಣೆಯಾಯಿತು. ನಂತರ ಎಸ್​ಐಟಿ ಹಲವು ತಂಡಗಳನ್ನು ರಚಿಸಿಕೊಂಡು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ : ರಾಜ್ಯಕ್ಕೆ ಪ್ರಜ್ವಲ್​ ರೇವಣ್ಣ ಬರೋದು ಡೌಟ್​​ – ಮೇ15ರಂದು ಬುಕ್​​ ಆಗಿದ್ದ ಫ್ಲೈಟ್​​​ ಟಿಕೆಟ್​​​ ಕ್ಯಾನ್ಸಲ್​​..!

Leave a Comment

DG Ad

RELATED LATEST NEWS

Top Headlines

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ

Live Cricket

Add Your Heading Text Here