Download Our App

Follow us

Home » ಅಪರಾಧ » ಪೆನ್​​ಡ್ರೈವ್‌ ಹಂಚಿಕೆ ಆರೋಪ ಮಾಡಿದ್ದ ನವೀನ್‌ ಗೌಡ ವಿರುದ್ಧ ಶಾಸಕ ಎ.ಮಂಜು ದೂರು..!

ಪೆನ್​​ಡ್ರೈವ್‌ ಹಂಚಿಕೆ ಆರೋಪ ಮಾಡಿದ್ದ ನವೀನ್‌ ಗೌಡ ವಿರುದ್ಧ ಶಾಸಕ ಎ.ಮಂಜು ದೂರು..!

ಬೆಂಗಳೂರು : ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು, ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ಎಂದು  ನವೀನ್‌ ಗೌಡ ಆರೋಪಿಸಿ ಫೇಸ್‌ಬುಕ್‌ ಪೋಸ್ಟ್‌ ಮಾಡಿದ್ದರ ವಿರುದ್ಧ ದೂರು ದಾಖಲಾಗಿದೆ.

ಪ್ರಜ್ವಲ್‌ ಪೆನ್​​ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ನವೀನ್​​ ಗೌಡ, ಹಾಸನದಲ್ಲಿ ನನಗೆ ಸಿಕ್ಕಿದ್ದ ಪೆನ್​ಡ್ರೈವ್ ಶಾಸಕರಿಗೆ ಕೊಟ್ಟಿದ್ದೇನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಡಿಯೊವನ್ನು ವೈರಲ್ ಮಾಡಿದ್ದರ ಹಿಂದೆ ಮಹಾ ನಾಯಕನ ಕೈವಾಡ ಇದೆ ಎಂದು ಹೇಳಿದ್ದರು. ಆ ಮಹಾ ನಾಯಕ ಅರಕಲಗೂಡು ಶಾಸಕರೇ ಇರಬಹುದು ಎಂದು ಆರೋಪಿಸಿ ಫೇಸ್‌ಬುಕ್​​ನಲ್ಲಿ ಪೋಸ್ಟ್‌ ಮಾಡಿದ್ದ.

ಇದೀಗ ಈ ಸಂಬಂಧ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು, ನವೀನ್ ಗೌಡ ವಿರುದ್ಧ ದೂರು ನೀಡಿದ್ದಾರೆ. ಶಾಸಕ ಎ. ಮಂಜು ನೀಡಿರುವ ದೂರಿನಲ್ಲಿ ನನಗೆ ನವೀನ್​​​ ಗೌಡ ಪರಿಚಯವೇ ಇಲ್ಲ, ನನಗೆ ಪೆನ್​ಡ್ರೈವ್​ ಕೊಟ್ಟಿಲ್ಲ. ನವೀನ್​​​ ಗೌಡ ಎಸ್ಐಟಿ ತನಿಖೆ ದಿಕ್ಕು ತಪ್ಪಿಸೋಕೆ ಹೇಳಿದ್ದಾನೆ. ಇದ್ರ ಹಿಂದೆ ರಾಜಕೀಯ ಷಡ್ಯಂತ್ರವೂ ಇದೆ, ಯಾರಿದ್ದಾರೆ ಗೊತ್ತಾಗ್ತಿಲ್ಲ. ನವೀನ್​​​ ಗೌಡ ಪೋಸ್ಟ್ ಬಗ್ಗೆ ತನಿಖೆ ಆಗಲಿ ಎಂದು ಮಂಜು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಪೆನ್​​ಡ್ರೈವ್​ ಪ್ರಕರಣ : ದೇವರಾಜೇಗೌಡರನ್ನು ಕಸ್ಟಡಿಗೆ ಪಡೆಯಲು SIT ಚಿಂತನೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here