ಬೆಂಗಳೂರು : ಸಿಐಡಿ ಸೆಕ್ಷನ್ ಸೂಪರಿಂಟೆಂಡ್ ವ್ಯಕಿಯೋರ್ವನಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 40 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಿದ CIDಯ ಸೆಕ್ಷನ್ ಸೂಪರಿಂಟೆಂಡ್ ಸೇರಿ ಇಬ್ಬರನ್ನು ವಿಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿಐಡಿ ಘಟಕದಲ್ಲಿ ಸೆಕ್ಷನ್ ಸೂಪರಿಂಟೆಂಡೆಂಟ್ ಆಗಿದ್ದ ಅನಿತಾ.ಬಿ.ಎಸ್ ಹಾಗೂ ರಾಮಚಂದ್ರ ಭಟ್ ಬಂಧಿತರಾಗಿದ್ದಾರೆ.
ಬಂಧಿತ ಆರೋಪಿಗಳು ಚಿಕ್ಕಮಗಳೂರಿನ ಕಲ್ಯಾಣನಗರದ ನಿವಾಸಿ ಸುನಿಲ್ ಎಂಬುವವರಿಗೆ ಬರೋಬ್ಬರಿ 40 ಲಕ್ಷ ರೂ. ವಂಚನೆ ಮಾಡಿದ್ದಾರೆ. 2021ರಲ್ಲಿ ಸುನೀಲ್ ಎಂಬಾತನಿಗೆ ಪರಿಚಯವಾಗಿದ್ದ ರಾಮಚಂದ್ರ ಭಟ್ ಎನ್ನುವವರು ಸಿಐಡಿ ಇಲಾಖೆ ಅಧಿಕಾರಿ ಅನಿತಾ ಅವರನ್ನು ಭೇಟಿ ಮಾಡಿಸಿ ಪರಿಚಯ ಮಾಡಿಕೊಟ್ಟಿದ್ದಾರೆ. ಈ ವೇಳೆ ಸುನೀಲ್‌ಗೆ ಕೆಪಿಎಸ್‌ಸಿ ನೇಮಕಾತಿಯ ಮೂಲಕ PWD ಇಲಾಖೆಯ AE ಹುದ್ದೆ ಕೊಡಿಸೋದಾಗಿ ನಂಬಿಸಿದ್ದರು.
KPSC ಮೂಲಕ ಸಹಾಯಕ ಇಂಜಿನಿಯರ್ ಹುದ್ದೆ ಕೊಡಿಸುವ ಆಮಿಷ ಒಡ್ಡಿದ್ದ ಅನಿತಾ ಅವರು ಸುನೀಲ್ನಿಂದ ಹಂತ ಹಂತಹಂತವಾಗಿ 40 ಲಕ್ಷ ರೂಪಾಯಿ ಹಣ ಪಡೆದಿದ್ದಾರೆ. ಅದರೆ ಸುನೀಲ್‌ಗೆ ಕೆಲಸ ಕೊಡಿಸದೇ, ಹಣ ವಾಪಸ್ ಕೊಡದೇ ಸತಾಯಿಸ್ತಿದ್ದರು. ಇನ್ನು ಸುನೀಲ್ ಹಣ ವಾಪಸ್ ಕೇಳಿದ್ದಕ್ಕೆ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ. ಈ ಬಗ್ಗೆ ಸುನೀಲ್ ನೀಡಿರುವ ದೂರಿನ ಮೇರೆಗೆ ವಿಜಯನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್ – ಸಿಎಂ ಸಿದ್ದುಗೆ ಸಾಹಿತಿಗಳು, ಚಿಂತಕರು, ಹೋರಾಟಗಾರರಿಂದ ಪತ್ರ..!