ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿರುವ, ತನುಷ್ ಶಿವಣ್ಣ, ಸೋನಾಲ್ ಮೊಂತೆರೊ ಜೋಡಿಯ ಹಾಗೂ ವಿ.ಲವ ನಿರ್ದೇಶನದ “Mr ನಟ್ವರ್ ಲಾಲ್” ಚಿತ್ರ ಇತ್ತೀಚಿಗೆ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಈಗ ಈ ಚಿತ್ರ ಅಮೆಜಾನ್ ಪ್ರೈಮ್ನಲ್ಲೂ ಲಭ್ಯವಿದೆ ಹಾಗೂ ಮೇ 17 ರಿಂದ ಬುಕ್ ಮೈ ಶೋನಲ್ಲೂ “Mr ನಟ್ವರ್ ಲಾಲ್” ಚಿತ್ರವನ್ನು ನೋಡಬಹುದು.
ವಿಲಿಯಂ ಡೇವಿಡ್ ಛಾಯಾಗ್ರಹಣ, ಧರ್ಮವಿಶ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಡಿಫರೆಂಟ್ ಡ್ಯಾನಿ, ಥ್ರಿಲ್ಲರ್ ಮಂಜು, ರಾ ಪುಷ್ಪರಾಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ತನುಷ್ ಶಿವಣ್ಣ, ಸೋನಾಲ್ ಮೊಂತೆರೊ, ನಾಗಭೂಷಣ, ಕಾಕ್ರೋಜ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಕಡ್ಡಿಪುಡಿ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ : ಅನಿರುದ್ಧ್ ಜತಕರ್ ಅಭಿನಯದ “chef ಚಿದಂಬರ” ಚಿತ್ರ ಜೂನ್ 14 ರಂದು ತೆರೆಗೆ..!
Post Views: 58