ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಈಗ ಕೊನೆಯ ಹಂತ ತಲುಪಿದೆ. ಇದೀಗ ತನಿಖೆ ಬಳಿಕ ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾವರ್ತಿ, ಬಾಮೈದ ಮಲ್ಲಿಕಾರ್ಜುನ್, ಜಮೀನು ಮಾಲೀಕ ದೇವರಾಜುಗೆ ಕ್ಲೀನ್‌ಚಿಟ್ ನೀಡಲಾಗಿದೆ.
ಮುಡಾ ನಿವೇಶನ ಹಂಚಿಕೆಯಲ್ಲಿ ಹಗರಣ ನಡೆದಿದೆ ಎಂದು ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಲೋಕಾಯುಕ್ತ ಇಲಾಖೆ ನೋಟಿಸ್ ನೀಡಿದೆ.
ಮೈಸೂರಿನ ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಹಂಚಿಕೆ ಮಾಡಲಾದ 14 ನಿವೇಶನಗಳಲ್ಲಿ ಅಕ್ರಮ ನಡೆದಿದೆ ಎಂದು ರಾಜ್ಯಪಾಲರಿಗೆ ದೂರು ನೀಡಿದ್ದರು. ಇದಾದ ನಂತರ ಮೈಸೂರಿನಲ್ಲಿ ಲೋಕಾಯುಕ್ತ ಇಲಾಖೆಗೆ ದೂರು ಸಲ್ಲಿಸಿ ತನಿಖೆಗೆ ಮನವಿ ಮಾಡಿದ್ದರು. ಈ ಹಗರಣ ಸಂಬಂಧ ಹಲವು ದಿನಗಳಿಂದ ತನಿಖೆ ಮಾಡಿದ ಲೋಕಾಯುಕ್ತ ಪೊಲೀಸ್ ಇಲಾಖೆಯು ಇದೀಗ ದೂರುದಾರ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರಿಗೆ ನೋಟೀಸ್ ನೀಡಿದ್ದಾರೆ.

ನೋಟಿಸ್ನಲ್ಲಿ ಏನಿದೆ? ತಾವು ನೀಡಿದ ದೂರಿನ ಮೇರೆಗೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ, ಮೈಸೂರು ಮೊ.ನಂ 11/2024, 50 120(2), 166, 403, 406, 420, 426, 465, 468, 340, 351 ಭಾರತೀಯದಂಡ ಸಂಹಿತೆ, 9, 13 ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988, 3, 53 & 54 ಬೇನಾಮಿ ಆಸ್ತಿ ವಹಿವಾಟುತಡೆ ಕಾಯ್ದೆ-1988, 3, 4 ಕರ್ನಾಟಕ ಭೂ ಕಬಳಿಕೆ -2011 0 0 2 (1) Hon’ble LXXXI Addl.
ಮುಡಾ ಹಗರಣದ ತನಿಖೆಯಲ್ಲಿ ತನಿಖಾಧಿಕಾರಿಗಳಿಗೆ ಈ ಪ್ರಕರಣ ಸಿವಿಲ್ ಸ್ವರೂಪದ್ದೆಂದು, ತನಿಖೆ ನಡೆಸಲು ತಕ್ಕುದಲ್ಲವೆಂದು, ಈ ಸಂಗತಿ ಅಥವಾ ಕಾನೂನಿನ ತಪ್ಪು ತಿಳುವಳಿಕೆಯೆಂದು, ಕ್ರಮ ಜರುಗಿಸತಕ್ಕುದಲ್ಲವೆಂದು (ಇದರಡಿಯಲ್ಲಿ ತನಿಖೆ ನಡೆಸದೆ ವಜಾ ಮಾಡಿದ ಮೊಕದ್ದಮೆಗಳು ಬರುತ್ತವೆ) ಹಾಗೂ ಮುಖ್ಯವಾಗಿ ಸಾಕ್ಷ್ಯಾಧಾರಗಳ ಕೊರತೆ ಎಂದು ಕಂಡು ಬಂದಿದೆ. ನೀವು ಈ ವರದಿಯನ್ನು ವಿರೋಧಿಸುವುದಿದ್ದರೆ, ತಾವು ಈ ನೋಟೀಸು ತಲುಪಿದ ಒಂದು ವಾರದೊಳಗಾಗಿ ಮೇಲೆ ನಮೂದಿಸಿದ ಮ್ಯಾಜಿಸ್ಟ್ರೇಟರ ಎದುರು ಆ ಬಗ್ಗೆ ವಿರೋಧಿಸಬಹುದಾಗಿದೆ ಎಂದು ತಿಳಿಸಲಾಗಿದೆ.
ಪ್ರಕರಣದ ಆರೋಪಿ-1 ರಿಂದ ಆರೋಪಿ-4 ರವರೆಗಿನ (ಸಿಎಂ ಸಿದ್ದರಾಮಯ್ಯ, ಪಾರ್ವತಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು) ಮೇಲಿನ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲವಾದ್ದರಿಂದ ಅಂತಿಮ ವರದಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಿಕೊಳ್ಳುತ್ತಿದೆ. ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ 2016ನೇ ಸಾಲಿನಿಂದ 2024ನೇ ಸಾಲಿನವರೆಗೆ 50:50 ಅನುಪಾತದಲ್ಲಿ ಪರಿಹಾರಾತ್ಮಕ ನಿವೇಶನಗಳನ್ನು ನೀಡಿರುವ ಆರೋಪಗಳ ಬಗ್ಗೆ ಹೆಚ್ಚುವರಿ ತನಿಖೆ ನಡೆಸಿ ಕಲಂ 173 (8) ಸಿ.ಆರ್.ಪಿ.ಸಿ ರೀತ್ಯಾ ಹೆಚ್ಚುವರಿ ಅಂತಿಮ ವರದಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಿಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಇದನ್ನೂ ಓದಿ : http://ಜರ್ನಿ ಕಥೆಯೊಂದಿಗೆ ಬೆಳ್ಳಿತೆರೆಗೆ ಬಂದ ನಿರ್ದೇಶಕ ಹಯವದನ.. ಫೆ.21ಕ್ಕೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ರಿಲೀಸ್!









