Download Our App

Follow us

Home » ರಾಜಕೀಯ » ರಾಜ್ಯದಲ್ಲಿ ಹಳ್ಳಹಿಡಿದ ಕಾನೂನು ಸುವ್ಯವಸ್ಥೆ – ಟ್ವೀಟ್ ಮೂಲಕ ಸರ್ಕಾರದ ವಿರುದ್ದ ಜೆಡಿಎಸ್ ಕಿಡಿ..!

ರಾಜ್ಯದಲ್ಲಿ ಹಳ್ಳಹಿಡಿದ ಕಾನೂನು ಸುವ್ಯವಸ್ಥೆ – ಟ್ವೀಟ್ ಮೂಲಕ ಸರ್ಕಾರದ ವಿರುದ್ದ ಜೆಡಿಎಸ್ ಕಿಡಿ..!

ಬೆಂಗಳೂರು : ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಏಪ್ರಿಲ್‌ 30ರವರೆಗೆ ಸುಮಾರು 430 ಕೊಲೆಗಳು ಹಾಗೂ 198 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಕೊಲೆ, ಅತ್ಯಾಚಾರ, ಮಹಿಳೆಯರು ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಸೈಬರ್ ಕ್ರೈಂ ಹಾಗೂ ಇತರೆ ಪ್ರಕಾರದ ಅಪರಾಧಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವುದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) ಅಂಕಿ–ಅಂಶಗಳಿಂದ ಹೊರಬಿದ್ದಿದೆ.

ಇದೀಗ ಈ ವಿಚಾರವಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿರೋ ಬಗ್ಗೆ ಜೆಡಿಎಸ್ ಟ್ವೀಟ್ ಮೂಲಕ ಕಿಡಿಕಾರಿದ್ದು, ರಾಜ್ಯ ಸರ್ಕಾರದ ವೈಫಲ್ಯದ ಆರೋಪ ಪಟ್ಟಿಯನ್ನು ಕೊಟ್ಟಿದೆ. ರಾಜ್ಯದಲ್ಲಿನ 4 ತಿಂಗಳ ಅಪರಾಧಗಳ ಪಟ್ಟಿಯನ್ನು ಜೆಡಿಎಸ್ ಬಿಚ್ಚಿಟ್ಟಿದ್ದು, ಗೃಹ ಸಚಿವ ಡಾ. ಜಿ. ಪರಮೇಶ್ವರ್​ ಅವರಿಗೆ ಜೆಡಿಎಸ್ ಟ್ವೀಟ್ ಮೂಲಕ ನೇರವಾಗಿ ಪ್ರಶ್ನೆ ಮಾಡಿದೆ.

ನಾಲ್ಕು ತಿಂಗಳಲ್ಲಿ ನಡೆದ ಅಪರಾಧಗಳ ಅಂಕಿ ಅಂಶಗಳ ಸಮೇತ ಜೆಡಿಎಸ್ ಟ್ವೀಟ್​​ ಮಾಡಿದ್ದು, 4 ತಿಂಗಳಲ್ಲಿ 430 ಕೊಲೆ, 198 ಅತ್ಯಾಚಾರ ನಡೆದಿವೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಅಂಕಿಅಂಶವನ್ನು (NCRB) ಉಲ್ಲೇಖಿಸಿ ಜೆಡಿಎಸ್ ಟ್ವೀಟ್ ಮಾಡಿದೆ. ಈ ಟ್ವೀಟ್​ನಲ್ಲಿ “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ ಎಂದು ಜೆಡಿಎಸ್ ಟ್ವೀಟ್​ನಲ್ಲಿ ಬರೆದುಕೊಂಡಿದೆ. ಇನ್ನು, ಗೃಹ ಇಲಾಖೆ ಕೆಲಸ ಮಾಡ್ತಿದ್ಯಾ..? ಅಥವಾ ನಿದ್ದೆ ಮಾಡ್ತಿದ್ಯಾ ಅಂತಾ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಅವರಿಗೆ ಪ್ರಶ್ನಿಸಿದೆ.

ಇದನ್ನೂ ಓದಿ : ನಟಿ ಪವಿತ್ರಾ ಜಯರಾಮ್ ಸಾವಿನ ಬೆನ್ನಲ್ಲೇ ಆಪ್ತ ಸ್ನೇಹಿತ ಚಂದು ಆತ್ಮಹ*ತ್ಯೆ..! –

Leave a Comment

DG Ad

RELATED LATEST NEWS

Top Headlines

ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ – 98 ಮಂದಿಗೆ ಜೀವಾವಧಿ ಶಿಕ್ಷೆ..!

ಕೊಪ್ಪಳ : ಮರಕುಂಬಿ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಬರೋಬ್ಬರಿ‌ 98 ಅಪರಾಧಿಗಳಿಗೆ ಜೀವಾವದಿ ಶಿಕ್ಷೆ ನೀಡಿ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ

Live Cricket

Add Your Heading Text Here