ಚಾಂಪಿಯನ್ಸ್ ಟ್ರೋಫಿ : ಇಂದು ಭಾರತ-ಬಾಂಗ್ಲಾ ಮುಖಾಮುಖಿ.. ಅರಬ್ಬರ ನಾಡಲ್ಲಿ ಅಬ್ಬರಿಸೋಕೆ ರೋಹಿತ್ ಪಡೆ ಸಜ್ಜು!

ದುಬೈ : ಬಹುನೀರಿಕ್ಷಿತ ಐಸಿಸಿ 2025ರ ಚಾಂಪಿಯನ್ಸ್‌ ಟ್ರೋಫಿ ಮೆಗಾ ಟೂರ್ನಿಗೆ ನಿನ್ನೆ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಪ್ರಾರಂಭಕ್ಕೂ ಮುನ್ನವೇ ಹೈಡ್ರಾಮಾ, ವಿವಾದಗಳ ಕೇಂದ್ರಬಿಂದುವಾಗಿದ್ದ ಈ ಬಾರಿಯ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಪ್ರಶಸ್ತಿಗಾಗಿ ಸೆಣಸಾಡುತ್ತಿವೆ. 7 ತಂಡಗಳು ತಮ್ಮ ಪಂದ್ಯಗಳನ್ನು ಪಾಕ್‌ನಲ್ಲಿ ಆಡಲಿದ್ದು, ಭಾರತದ ಎಲ್ಲಾ ಪಂದ್ಯಗಳು ದುಬೈನಲ್ಲಿ ನಡೆಯಲಿದೆ.

ಭಾರತ ತನ್ನ ಮೊದಲ ಪಂದ್ಯವನ್ನು ಇಂದು (ಫೆ.20) ಬಾಂಗ್ಲಾದೇಶದ ವಿರುದ್ಧ ಆಡಲಿದ್ದು, ಈ ರೋಚಕ ಪಂದ್ಯವನ್ನು ಗೆದ್ದು ಟೂರ್ನಿಯಲ್ಲಿ ಶುಭಾರಂಭ ಮಾಡುವ ಕನಸನ್ನು ಉಭಯ ತಂಡಗಳು ಹೊಂದಿದೆ. ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಟೀಂ ಇಂಡಿಯಾ ಬಲಿಷ್ಠವಾಗಿದ್ದು, ಸ್ಟಾರ್ ಆಟಗಾರರನ್ನು ಹೊಂದಿರುವ ರೋಹಿತ್ ಪಡೆ ದುಬೈನ ಅಂತಾರಾಷ್ಟ್ರೀಯ ಕ್ರೀಡಾಗಂಣದಲ್ಲಿ ಅಬ್ಬರಿಸುವ ಪ್ಲ್ಯಾನ್ ಮಾಡಿಕೊಂಡಿದೆ.

ಪಂದ್ಯ ಎಷ್ಟು ಗಂಟೆಗೆ? ಲೈವ್ ವೀಕ್ಷಿಸುವುದೇಗೆ? ಭಾರತ-ಬಾಂಗ್ಲಾದೇಶ ನಡುವಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:30ಕ್ಕೆ ಆರಂಭವಾಗಲಿದೆ. ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಟಿವಿಯಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಹಾಗೆಯೇ ಮೊಬೈಲ್‌ನಲ್ಲಿ ಜಿಯೋಹಾಟ್‌ಸ್ಟಾರ್ ಆ್ಯಪ್​ನಲ್ಲಿ ಲೈವ್ ನೋಡಬಹುದು.

ಉಭಯ ತಂಡಗಳು ಹೀಗಿವೆ :

ಭಾರತ ತಂಡ : ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.

ಬಾಂಗ್ಲಾದೇಶ ತಂಡ : ನಜ್ಮುಲ್ ಹೊಸೈನ್ ಶಾಂಟೋ (ನಾಯಕ), ಮುಷ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹೀದ್ ಹೃದಯ, ಸೌಮ್ಯ ಸರ್ಕಾರ್, ತಂಜಿದ್ ಹಸನ್, ಮಹ್ಮದುಲ್ಲಾ, ಜಾಕರ್ ಅಲಿ, ಮೆಹದಿ ಹಸನ್ ಮಿರಾಜ್, ರಿಷದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಪರ್ವೇಜ್ ಹೊಸೈನ್, ನಸುಮ್ ಅಹ್ಮದ್, ತಂಜಿಮ್ ಹಸನ್, ನಹಿದ್ ರಾಣಾ.

Btv Kannada
Author: Btv Kannada

Leave a Comment

Read More