Download Our App

Follow us

Home » ರಾಷ್ಟ್ರೀಯ » ಅದಾನಿ ಮತ್ತೆ ಏಷ್ಯಾದ ನಂಬರ್ 1 ಶ್ರೀಮಂತ..

ಅದಾನಿ ಮತ್ತೆ ಏಷ್ಯಾದ ನಂಬರ್ 1 ಶ್ರೀಮಂತ..

ನವದೆಹಲಿ: ಹಿಂಡನ್ ಬರ್ಗ್ ವರದಿ ಕುರಿತಂತೆ ಕೋರ್ಟ್ ನ ಮಹತ್ವದ ಆದೇಶ ಹೊರಬಿದ್ದ ಬೆನ್ನಲ್ಲೇ ಇದೀಗ ಮತ್ತೆ ಗೌತಮ್‌ ಅದಾನಿ ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಗೌತಮ್ ಅದಾನಿ ಈಗ ವಿಶ್ವದ ಎರಡನೇ ಅತಿ ದೊಡ್ಡ ಶ್ರೀಮಂತ; ಜೆಫ್‌ ಹಿಂದಿಕ್ಕಿ ಈ ಸಾಧನೆ -  gautam adani now world's second richest surpasses jeff bezos | The Economic  Times Kannada

ಹೌದು.. ಅದಾನಿ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಗೌತಮ್‌ ಅದಾನಿ ಅವರು ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರನ್ನು ಹಿಂದಿಕ್ಕಿ ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಬ್ಲೂಮ್‌ಬರ್ಗ್‌ ಬಿಲಿಯನೇರ್ಸ್‌ ಇಂಡೆಕ್ಸ್‌ನಲ್ಲಿ ಹೊರಹೊಮ್ಮಿದ್ದಾರೆ.

ಜಗತ್ತಿನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿ ಅದಾನಿ ಇದ್ದು, ರಿಲಯನ್ಸ್ ಸಮೂಹದ ಮುಖ್ಯಸ್ಥ ಅಂಬಾನಿ 13ನೇ ಸ್ಥಾನದಲ್ಲಿದ್ದಾರೆ. ವರದಿಯಲ್ಲಿರುವಂತೆ ಅದಾನಿ ಒಟ್ಟು 97.6 ಬಿಲಿಯನ್‌ ಅಮೆರಿಕನ್‌ ಡಾಲರ್‌ ಸಂಪತ್ತಿನ ಒಡೆಯರಾಗಿದ್ದಾರೆ. ಅತ್ತ ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು ಅವರು ಒಟ್ಟು ಸಂಪತ್ತಿನ ಮೌಲ್ಯ 97 ಬಿಲಿಯನ್‌ ಅಮೆರಿಕನ್‌ ಡಾಲರ್‌ ಆಗಿದೆ ಎಂದು ಹೇಳಲಾಗಿದೆ.

Btv news desk

ಇದನ್ನೂ ಓದಿ : 28ಕ್ಷೇತ್ರಗಳಿಗೆ 28ಸಂಯೋಜಕರ ನೇಮಿಸಿದ ಕಾಂಗ್ರೆಸ್​​..

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here