ನ್ಯೂಯಾರ್ಕ್ : ಅಮೆರಿಕದ ನ್ಯೂಯಾರ್ಕ್ನ ಟೈಮ್ಸ್ ಸ್ಕ್ವೇರ್ನಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಬೆಳಗಿನ ಜಾವ 1.20ರ ಸುಮಾರಿಗೆ ದಾಳಿ ನಡೆದಿದ್ದು, ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಜನರು ಸ್ಥಳದಿಂದ ಓಡುತ್ತಿರುವುದು ಹಾಗೂ ಪೊಲೀಸರು ಪ್ರದೇಶವನ್ನು ಸುತ್ತುವರೆದಿರುವುದು ಹಾಗೂ ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿರುವುದನ್ನು ಕಾಣಬಹುದು.
ಓರ್ವ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇನ್ನೂ ಯಾವುದೇ ದೂರು ದಾಖಲಾಗಿಲ್ಲ. ಈ ಘಟನೆಗೆ ಕಾರಣವೂ ತಿಳಿದುಬಂದಿಲ್ಲ.
ಇದನ್ನೂ ಓದಿ : ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ – ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್!
Author: Btv Kannada
Post Views: 465







