ಯಲ್ಲಾಪುರದಲ್ಲಿ ಭೀಕರ ಅಪಘಾತ – ಪ್ರವಾಸಕ್ಕೆ ಹೊರಟ್ಟಿದ್ದ ಇಡೀ ಕುಟುಂಬವೇ ದುರಂತ ಅಂತ್ಯ!

ಕಾರವಾರ : ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಅರಬೈಲ್​ ಘಟ್ಟದಲ್ಲಿ ನಡೆದಿದೆ.

ಕುಟುಂಬವೊಂದು ಕೊಪ್ಪಳದಿಂದ ಪ್ರವಾಸಕ್ಕೆಂದು ಅಂಕೋಲಾ ಕಡೆಗೆ ಹೊರಟಿತ್ತು. ಅರಬೈಲ್​ ಘಟ್ಟದ ಬಳಿ ಓವರ್​ಟೇಕ್ ಮಾಡುವ ಭರದಲ್ಲಿ ಯಮವೇಗದಲ್ಲಿ ಬಂದ ಲಾರಿಯೊಂದು ಕಾರಿಗೆ ಗುದ್ದಿದೆ. ಲಾರಿ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಪರಿಣಾಮ ಕಾರಿನಲ್ಲಿದ್ದ ವೆಂಕಟೇಶ್​, ಅವರ ಪತ್ನಿ ಚೈತ್ರಾ, ನಾಲ್ಕು ವರ್ಷದ ಮಗು ಶ್ರೀಹಾನ್ ಸ್ಥಳದಲ್ಲೇ ಅಸುನೀಗಿದ್ದಾರೆ.

ಇನ್ನು ಕಾರಿನಲ್ಲಿದ್ದ ಮೃತ ವೆಂಕಟೇಶ್​ ಸಹೋದರ ಶ್ರೀಕಾಂತ್​ ರೆಡ್ಡಿಯವರ ಎರಡು ಕಾಲಿಗೆ ಭೀಕರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ. ಲಾರಿ ಚಾಲಕನ ವಿರುದ್ದ ಪ್ರಕರಣ ದಾಖಲಾಗಿದೆ.

Btv Kannada
Author: Btv Kannada

Leave a Comment

Read More