Download Our App

Follow us

Home » ಮೆಟ್ರೋ » ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್​ಗಳಿಗೆ ಬಾಂಬ್​ ಬೆದರಿಕೆ..!

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್​ಗಳಿಗೆ ಬಾಂಬ್​ ಬೆದರಿಕೆ..!

ಬೆಂಗಳೂರು : ನಗರದ ಪ್ರಮುಖ ಪ್ರದೇಶಗಳಲ್ಲಿರುವ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಮಧ್ಯರಾತ್ರಿ 2 ಗಂಟೆಗೆ ಬಾಂಬ್​ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಒಟೆರಾ ಹೋಟೆಲ್ ಸೇರಿದಂತೆ ನಗರದ ಮೂರು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿವೆ.

ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬಂದಿರುವುದು ಬೆಳಕಿಗೆ ಬಂದಿದೆ. ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸ್ ಇನ್ನಿತರ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ. ಇದರಂತೆ ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ಹೋಟೆಲ್‌ನಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದರು.

ಬಳಿಕ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಆರಂಂಭಿಸಿದೆ. ಅಧಿಕಾರಿಗಳು ಸಹ ಸ್ಥಳದಲ್ಲಿದ್ದು, ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಬೆದರಿಕೆ ಕುರಿತು ಮಾಹಿತಿ ಪಸರುತ್ತಿದ್ದಂತೆ ಹೋಟೆಲ್‌ಗಳ ಮುಂದೆ, ಕೆಲವು ಗಂಟೆಗಳ ಅನಿಶ್ಚಿತ ಮತ್ತು ಆತಂಕದ ವಾತಾವರಣ ಏರ್ಪಟ್ಟಿತ್ತು. ಬಳಿಕ ಪೊಲೀಸರು ಬಾಂಬ್ ಬೆದರಿಕೆಯನ್ನು ಸುಳ್ಳು ಎಂದು ಘೋಷಿಸಿದರು.

ಈ ಹಿಂದೆ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಲಾಗಿತ್ತು. ಅದಾದ ಬಳಿಕ ಇಂತಹ ಹುಸಿ ಬಾಂಬ್ ಬೆದರಿಕೆಗಳು ಹೆಚ್ಚಾಗಿದ್ದು, ಜನರಲ್ಲಿ ಆತಂಕ ಹುಟ್ಟಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಉದ್ಯಮಿ​ಗೆ ರೌಡಿ ನಾಗನ ಸಹಚರ ಬ್ಲಾಕ್​ ಬಾಲನಿಂದ ಧಮ್ಕಿ – FIR ದಾಖಲು..!

 

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here