Download Our App

Follow us

Home » ರಾಜಕೀಯ » ತಾಳ್ಮೆ ಪರೀಕ್ಷಿಸಬೇಡ, ಎಲ್ಲಿದ್ರೂ ಬಂದುಬಿಡು, ಪೊಲೀಸರಿಗೆ ಶರಣಾಗು : ಪ್ರಜ್ವಲ್‌ಗೆ ದೇವೇಗೌಡರ ವಾರ್ನಿಂಗ್..!

ತಾಳ್ಮೆ ಪರೀಕ್ಷಿಸಬೇಡ, ಎಲ್ಲಿದ್ರೂ ಬಂದುಬಿಡು, ಪೊಲೀಸರಿಗೆ ಶರಣಾಗು : ಪ್ರಜ್ವಲ್‌ಗೆ ದೇವೇಗೌಡರ ವಾರ್ನಿಂಗ್..!

ಬೆಂಗಳೂರು : ಪೆನ್​ಡ್ರೈವ್​ ಪ್ರಕರಣ ಸಂಬಂಧ ವಿದೇಶದಲ್ಲಿ ತಲೆಮರಿಸಿಕೊಂಡಿರುವ ಪ್ರಜ್ವಲ್ ರೇವಣ್ಣ ಅವರಿಗೆ ಕೂಡಲೇ ವಿದೇಶದಿಂದ ವಾಪಸ್ ಆಗುವಂತೆ ಮಾಜಿ ಪ್ರಧಾನಿ ದೇವೇಗೌಡರು ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪ್ರಜ್ವಲ್​ ರೇವಣ್ಣಗೆ ಎಚ್ಚರಿಕೆಯ ಬಹಿರಂಗ ಪತ್ರ ಬರೆದಿರುವ ದೇವೇಗೌಡರು, ಕೂಡಲೇ ವಾಪಸ್ ಬೆಂಗಳೂರಿಗೆ ಬರುವಂತೆ ಮೊಮ್ಮನಿಗೆ ಖಡಕ್​ ಸಂದೇಶ ರವಾನಿಸಿದ್ದಾರೆ. ಪ್ರಜ್ವಲ್ ರೇವಣ್ಣ ನೀನು ಎಲ್ಲೇ ಇದ್ದರೂ ಬಂದು ಪೊಲೀಸರ ಮುಂದೆ ಶರಣಾಗು, ವಿಚಾರಣೆಯನ್ನು ಎದುರಿಸು. ಯಾವುದೇ ಮುಲಾಜಿಲ್ಲದೇ ಮರ್ಜಿಇಲ್ಲದೇ ಬಂದು ಶರಣಾಗು ಎಂದು ಪತ್ರದಲ್ಲಿ ಖಡಕ್ ಆಗಿ ಹೇಳಿದ್ದಾರೆ.

ಪ್ರಜ್ವಲ್​ಗೆ ದೇವೇಗೌಡ್ರು ಬರೆದ ಎಚ್ಚರಿಕೆ ಪತ್ರದಲ್ಲೇನಿದೆ? ಪ್ರಜ್ವಲ್​ ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ.

ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು. ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ.

ಇದನ್ನೂ ಓದಿ : ನಾನು ಅಂತರ್ಜಾತಿ ಮದುವೆ ಮಾಡ್ಕೋಬೇಕು ಅಂತ ಆಸೆ ಪಟ್ಟಿದ್ದೆ : ಕಾಲೇಜು ದಿನಗಳ​ ಪ್ರೇಮ ಕಹಾನಿ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ..

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here