ಉಡುಪಿ : ಉಡುಪಿಯಲ್ಲಿ ಸಿನಿಮಾ ಸ್ಟೈಲ್ನಲ್ಲಿ ಗ್ಯಾಂಗ್ ವಾರ್ ನಡೆದಿದೆ. ನಡುರಸ್ತೆಯಲ್ಲೇ ಎರಡು ಗುಂಪುಗಳು ತಲ್ವಾರ್ ಹಿಡಿದು ಬಡಿದಾಡಿಕೊಂಡಿದೆ. ಈ ಘಟನೆ ಮೇ 18ರ ರಾತ್ರಿ ಕುಂಜಿಬೆಟ್ಟು ರಸ್ತೆಯಲ್ಲಿ ನಡೆದಿದೆ.
ಅಡ್ಡಾದಿಡ್ಡಿ ಕಾರು ಚಲಾಯಿಸಿ ಹುಚ್ಚಾಟ ಮೆರೆದಿದ್ದು, ಗ್ಯಾಂಗ್ ವಾರ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ. ಕೃತ್ಯಕ್ಕೆ ಬಳಸಿದ ಎರಡು ಸ್ವಿಫ್ಟ್ ಕಾರುಗಳು ಮತ್ತು ಎರಡು ಬೈಕ್ಗಳು, ಒಂದು ತಲ್ವಾರ್ ಮತ್ತು ಒಂದು ಡ್ರ್ಯಾಗರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ : ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಕ್ರೌರ್ಯ ಮೆರೆದ ವಾರ್ಡ್ ಬಾಯ್ : ಚಿಕಿತ್ಸೆಗಾಗಿ ಬಂದ ರೋಗಿ ಮೇಲೆ ಮನಸೋ ಇಚ್ಛೆ ಹ*ಲ್ಲೆ..!
Post Views: 257