Download Our App

Follow us

Home » ಸಿನಿಮಾ » ಪಠಾಣ್​ ಸಿನಿಮಾಗೆ ಸೆಡ್ಡು ಹೊಡೆದ ಕೆಡಿ : ದುಬಾರಿ ಮೊತ್ತಕ್ಕೆ ಚಿತ್ರದ ಆಡಿಯೋ ರೈಟ್ಸ್ ಸೇಲ್..!

ಪಠಾಣ್​ ಸಿನಿಮಾಗೆ ಸೆಡ್ಡು ಹೊಡೆದ ಕೆಡಿ : ದುಬಾರಿ ಮೊತ್ತಕ್ಕೆ ಚಿತ್ರದ ಆಡಿಯೋ ರೈಟ್ಸ್ ಸೇಲ್..!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾದ ರಿಲೀಸ್ ಡೇಟ್​​ನ್ನು ಇತ್ತೀಚೆಗಷ್ಟೆ ಘೋಷಿಸಲಾಗಿದೆ. ಅದರ ಬೆನ್ನಲೇ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಬಿಡುಗಡೆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಸಿನಿಮಾ ರಿಲೀಸ್ ಮುನ್ನವೇ ದುಬಾರಿ ಮೊತ್ತಕ್ಕೆ ಕೆಡಿ ಚಿತ್ರದ ಆಡಿಯೋ ರೈಟ್ಸ್ ರಿಲೀಸ್ ಆಗಿದೆ.
ಕೆಡಿ ಚಿತ್ರವು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಅದ್ಧೂರಿಯಾಗಿ ಈ ಚಿತ್ರವನ್ನು ಕೆವಿಎನ್ ಸಂಸ್ಥೆ ನಿರ್ಮಾಣ ಮಾಡಿದೆ. ಈ ಸಿನಿಮಾ ಬಹುತೇಕ ಚಿತ್ರೀಕರಣ ಮುಗಿಸಿದೆ. ಕೆಡಿ ರೆಟ್ರೋ ಸ್ಟೈಲ್ ಸಿನಿಮಾವಾದ್ದರಿಂದ ಚಿತ್ರತಂಡ ಕೂಡ ಅದೇ ಲುಕ್‌ನಲ್ಲಿ ಸುದ್ದಿಗೋಷ್ಠಿಗೆ ಆಗಮಿಸಿದ್ದರು.  ಕನ್ನಡ ಚಿತ್ರರಂಗದಲ್ಲೇ ದಾಖಲೆ ಮೊತ್ತಕ್ಕೆ ಕೆಡಿ ಆಡಿಯೋ ರೈಟ್ಸ್ ಮಾರಾಟವಾಗಿದೆ ಎಂದು ಚಿತ್ರತಂಡ ಹೇಳಿದೆ. ಆನಂದ್ ಆಡಿಯೋ ಸಂಸ್ಥೆ ರೈಟ್ಸ್ ಕೊಂಡುಕೊಂಡಿದೆ. 17 ಕೋಟಿ 70 ಲಕ್ಷ ರೂಪಾಯಿಗೆ ಆಡಿಯೋ ರೈಟ್ಸ್ ಸೇಲ್ ಆಗಿದೆ ಎಂದು ತಿಳಿಸಿದ್ದಾರೆ.
ಶಾರುಖ್ ನಟನೆಯ ‘ಪಠಾಣ್’ ಚಿತ್ರಕ್ಕೆ 180 ಜನರನ್ನು ಬಳಸಿ, ಆರ್ಕೆಸ್ಟ್ರಾ ಮಾಡಿಸಲಾಗಿತ್ತು. ಆದರೆ ‘ಕೆಡಿ’ ಸಿನಿಮಾ ಅದನ್ನು ಮೀರಿಸಿದೆ. ಆ ಮೂಲಕ ಮೇಕಿಂಗ್ ಹಂತದಲ್ಲೇ ಸಿನಿಮಾ ಹೊಸ ದಾಖಲೆ ಬರೆದಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ವೇಳೆ ನಟ ಧ್ರುವ ಸರ್ಜಾ ಮಾತನಾಡಿ, ಕೆಡಿ ಅಂದ್ರೆ ಕಾಳಿದಾಸ. ಈ ಸಿನಿಮಾದಲ್ಲಿ ಕಾಳಿದಾಸ ನಾನೇ. ನಿರ್ದೇಶಕ ಪ್ರೇಮ್ ಜೊತೆಗೆ ಸಿನಿಮಾ ಮಾಡಬೇಕು ಅಂತ ನಿರ್ಧಾರ ಮಾಡಿದ್ದೆ. ಅದು ಕೆವಿಎನ್ ಸಂಸ್ಥೆಯಿಂದ ಆರಂಭ ಆಯ್ತು. ಚಿತ್ರದ ಆಡಿಯೋ ಹಕ್ಕು ದೊಡ್ಡ ಮೊತ್ತಕ್ಕೆ ಮಾರಾಟ ಆಗಿದ್ದು, ತುಂಬಾ ಖುಷಿ ಆಗಿದೆ. ನನ್ನ ಅದ್ಧೂರಿ ಸಿನಿಮಾ 4 ಕೋಟಿ ರೂ. ಖರ್ಚಿನಲ್ಲಿ ನಿರ್ಮಾಣವಾಗಿತ್ತು. ಆದರೆ ಈಗ ಕೆಡಿ ಸಿನಿಮಾದ ಆಡಿಯೋ ಹಕ್ಕು ಮಾತ್ರ 17.70 ಕೋಟಿ ರೂ. ಸೇಲ್ ಆಗಿದೆ. ಸಿನಿಮಾ ಕೂಡ ತುಂಬಾ ರಿಚ್ ಆಗಿ ಮೂಡಿ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

‘ಕೆಡಿ’ ಸಿನಿಮಾದಲ್ಲಿ ಧ್ರುವ ಸರ್ಜಾ ಜೊತೆಗೆ ಸಂಜಯ್ ದತ್, ಶಿಲ್ಪಾ ಶೆಟ್ಟಿ, ರೀಶ್ಮಾ ನಾಣಯ್ಯ ಇನ್ನೂ ಕೆಲವರು ನಟಿಸಿದ್ದಾರೆ. ಸಿನಿಮಾಕ್ಕೆ ಪ್ರೇಮ್ ನಿರ್ದೇಶನ ಮಾಡಿದ್ದು, ಬಂಡವಾಳವನ್ನು ಕೆವಿಎನ್ ಪ್ರೊಡಕ್ಷನ್ ಬಂಡವಾಳ ಹೂಡಿದೆ. ಸಿನಿಮಾ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆಗಲಿದೆ.

ಇದನ್ನೂ ಓದಿ : ‘ಸಹಾರಾ’ ಚಿತ್ರದ ಫಸ್ಟ್ ಲುಕ್ ರಿಲೀಸ್ : ಸಿನಿಮಾಗೆ ಸಾಥ್ ಕೊಟ್ಟ ಕ್ರಿಕೆಟರ್ ಕೆ. ಗೌತಮ್..!

Leave a Comment

DG Ad

RELATED LATEST NEWS

Top Headlines

ಅಭ್ಯರ್ಥಿ ಡಿಸೈಡ್ ಮಾಡೋದು ಬಿಜೆಪಿ ವರಿಷ್ಠರು ಮತ್ತು ನಾನು – ಯೋಗೇಶ್ವರ್​ಗೆ HDK ಟಾಂಗ್​​​..!

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ತೆರವಾಗಿರುವ ಮೂರು ವಿಧಾನ ಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ನಡುವೆ ಚನ್ನಪಟ್ಟಣ

Live Cricket

Add Your Heading Text Here