ಹಾಸನ : ಕುಂಭಮೇಳಕ್ಕೆ ಹೋಗುತ್ತಿದ್ದಾಗ ಕಾರು ಅಪಘಾತ ಸಂಭವಿಸಿದ ಪರಿಣಾಮ ಹಾಸನ ಮೂಲದ ಯುವಕ ಸಾವನ್ನಪ್ಪಿದ್ದು, ತಾಯಿಗೆ ಗಂಭೀರ ಗಾಯವಾಗಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ನಡೆದಿದೆ.
ಶ್ರವಣಬೆಳಗೊಳ ಸಮೀಪದ ಕುಂಭೇನಹಳ್ಳಿ ಗ್ರಾಮದ ನಿತಿನ್ ಅಲಿಯಾಸ್ ಯಶು (32) ಮೃತ ಯುವಕ. ಕುಟುಂಬಸ್ಥರ ಜೊತೆ ಕುಂಭಮೇಳಕ್ಕೆ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಿತಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಿತಿನ್ ತಾಯಿ ಪುಷ್ಪ ಸ್ಥಿತಿ ಗಂಭೀರವಾಗಿದ್ದು, ಉಳಿದ ಮೂವರಿಗೆ ಗಾಯಗಳಾಗಿದೆ. ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿತಿನ್ ಖರೀದಿಸಿದ್ದ ಹೊಸ ಕಾರಿನಲ್ಲಿ ಫೆ 15ರಂದು ಕುಂಭಮೇಳಕ್ಕೆ ಹೊರಟಿದ್ದರು. ಫೆ.16ರಂದು ಕೊಲ್ಲಾಪುರದ ಮಹಾಲಕ್ಷ್ಮಿ ದೇವಾಲಯಕ್ಕೆ ಭೇಟಿ ನೀಡಿ, ಅಲ್ಲಿಂದ ಕಾಶಿ ವಿಶ್ವನಾಥನ ದರ್ಶನ ಮುಗಿಸಿ ಇಂದು ಬೆಳಗಿನಜಾವ ವಾರಾಣಸಿ ಮೂಲಕ ಪ್ರಯಾಗ್ರಾಜ್ಗೆ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.
ಇದನ್ನೂ ಓದಿ : http://ಶಾಸಕ ಮುನಿರತ್ನ ವಿರುದ್ಧದ ಜಾತಿನಿಂದನೆ ಕೇಸ್ – ಆದೇಶ ಕಾಯ್ದಿರಿಸಿದ ಹೈಕೋರ್ಟ್!









