ಬೆಂಗಳೂರು : ಬೆಂಗಳೂರಿನ ಜಿ.ಆರ್.ಫಾರ್ಮ್ ಹೌಸ್ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ಸೇರಿ 8 ಜನರಿಗೆ ಮೇ 27 ರಂದು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಿತ್ತು. ಆದರೆ ಇದೀಗ ನಟ ಹೇಮಾ ಮತ್ತೆ ನಾಟಕ ಶುರು ಮಾಡಿಕೊಂಡಿದ್ದಾರೆ.
ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಜನರ ರಕ್ತದ ಮಾದರಿಯನ್ನು ಸಂಗ್ರಹಿಸಿ ಟೆಸ್ಟ್ ಮಾಡಲಾಗಿತ್ತು. ಅವರಲ್ಲಿ ಕೆಲವು ಮಂದಿ ಡ್ರಗ್ಸ್ ಸೇವಿಸಿರುವುದು ದೃಢವಾಗಿದ್ದು, ಹೇಮಾ ಬ್ಲಡ್ ರಿಪೋರ್ಟ್ನಲ್ಲಿ ಡ್ರಗ್ಸ್ ಅಂಶ ಇರುವುದು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಸಿಸಿಬಿ ನಟಿ ಹೇಮಾ ಸೇರಿ 8 ಮೇ 27 ರಂದು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಿತ್ತು.
ಇದೀಗ ಮತ್ತೆ ಡ್ರಾಮ ಶುರು ಮಾಡಿರುವ ತೆಲುಗು ನಟಿ ಹೇಮಾ ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗಲು ಕಳ್ಳಾಟ ಮಾಡುತ್ತಿದ್ದು, ವೈರಲ್ ಫೀವರ್ ಕಾರಣ ನೀಡಿ ಒಂದು ವಾರ ಕಾಲವಕಾಶ ಕೇಳಿದ್ದಾರೆ. ಆದರೆ ಮನವಿ ಪರಿಗಣಿಸದ ಸಿಸಿಬಿ ಮತ್ತೊಂದು ನೋಟಿಸ್ ನೀಡಲು ತಯಾರಿ ನಡೆಸುತ್ತಿದೆ.
ಇದಕ್ಕೂ ಮುನ್ನ ನಟಿ ಹೇಮಾ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ, ಈ ಪಾರ್ಟಿಯಲ್ಲಿ ಇರಲಿಲ್ಲ ಎಂದು ವಿಡಿಯೋ ಮೂಲಕ ಸ್ಪಷ್ಟಪಡಿಸಿದ್ದರು. ಅದರ ಬೆನ್ನಲ್ಲೇ ಅಸಲಿ ವಿಷಯ ಗೊತ್ತಾಗಿತ್ತು. ರೇವ್ ಪಾರ್ಟಿ ನಡೆದ ಬೆಂಗಳೂರಿನ ರೆಸಾರ್ಟ್ನಿಂದಲೇ ವಿಡಿಯೋ ಮಾಡಿ ‘ನಾನು ಹೈದರಾಬಾದ್ನಲ್ಲಿ ಇದ್ದೀನಿ’ ಎಂದು ಹೇಮಾ ಸುಳ್ಳು ಹೇಳಿ ಮಂಕು ಬೂದಿ ಎರೆಚಿದ್ದರು.
ಇದನ್ನೂ ಓದಿ : ಕುಡಿದು ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಆಸ್ಪತ್ರೆ ಸಿಬ್ಬಂದಿ : ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು..!