Download Our App

Follow us

Home » ಜಿಲ್ಲೆ » ಕಲಬುರಗಿಯಲ್ಲಿ ಬೈಕ್-ಕೆಕೆಆರ್​ಟಿಸಿ ಬಸ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಮೂವರು ಸಾ*ವು..!

ಕಲಬುರಗಿಯಲ್ಲಿ ಬೈಕ್-ಕೆಕೆಆರ್​ಟಿಸಿ ಬಸ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಮೂವರು ಸಾ*ವು..!

ಕಲಬುರಗಿ : ಬೈಕ್​ ಹಾಗೂ ಕೆಕೆಆರ್​ಟಿಸಿ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಮಲಾಪುರ ತಾಲೂಕಿನ ಬಳಿ ನಡೆದಿದೆ.

ತಾಲೂಕಿನ ಕಿಣ್ಣಿ ಸಡಕ್ ಗ್ರಾಮದ ವಿಶಾಲ್ ಜಾಧವ್ (17), ಚಂದ್ರಕಾಂತ (20) ಮತ್ತು ಸಮೀರ್ (23) ಮೃತರು. ಈ ಯುವಕರು ಕೆಲಸದ ನಿಮಿತ್ತ ಒಂದೇ ಬೈಕ್​ನಲ್ಲೇ ತಮ್ಮ ಗ್ರಾಮದಿಂದ ಕಲಬುರಗಿಗೆ ಹೋಗುತ್ತಿದ್ದರು. ಕಲಬುರಗಿಯಿಂದ ಹುಮನಾಬಾದ್ ಕಡೆಗೆ ಸಾರಿಗೆ ಬಸ್ ತೆರಳುತ್ತಿತ್ತು. ಈ ವೇಳೆ ಕಮಲಾಪುರ ತಾಲೂಕು ಬಳಿ ಬರುತ್ತಿದ್ದಂತೆ ಬೈಕ್​ ಮತ್ತು ಬಸ್​ ನಡುವೆ ಭಯಾನಕವಾದ ಅಪಘಾತ ಸಂಭವಿಸಿದೆ.

ಪರಿಣಾಮ ಬೈಕ್​ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಮಲಾಪುರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಂಬುಲೆನ್ಸ್​ ಮೂಲಕ ಮೃತದೇಹಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೂವರು ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ : ಅರ್ಜುನ ಆನೆಗೆ ಸ್ಮಾರಕ ನಿರ್ಮಾಣ : ದರ್ಶನ್​ ಅಭಿಮಾನಿಗಳ ಹೆಸರಲ್ಲಿ ಲಕ್ಷಾಂತರ ಹಣ ಸಂಗ್ರಹಿಸಿದ ಖದೀಮ..!

 

 

 

 

Leave a Comment

DG Ad

RELATED LATEST NEWS

Top Headlines

ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಗೆ ಮತ್ತೊಂದು ದೂರು..!

ಮೈಸೂರು : ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಕಾನೂನು ಕಂಟಕ ಎದುರಿಸುತ್ತಿದ್ದಾರೆ. ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಸದ್ಯ ಹೈಕೋರ್ಟ್‌ನಲ್ಲಿ

Live Cricket

Add Your Heading Text Here