Download Our App

Follow us

Home » ಜಿಲ್ಲೆ » ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ 40ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ಪೊಲೀಸರಿಂದ ದಾಳಿ..!

ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ 40ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ಪೊಲೀಸರಿಂದ ದಾಳಿ..!

ಹುಬ್ಬಳ್ಳಿ : ಅಂಜಲಿ ಹತ್ಯೆ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಎಚ್ಚೆತ್ತ ಹುಬ್ಬಳ್ಳಿ ಪೊಲೀಸರು, ನಗರದಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ರೌಡಿಶೀಟರ್​ಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ಇಂದು ಬೆಳ್ಳಂಬೆಳಗ್ಗೆ ರೌಡಿಶೀಟರ್​ಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ರೇಡ್​ ನಡೆಸಿದ್ದಾರೆ.

ಇನ್ಸ್​ಪೆಕ್ಟರ್​ ಸಮೀವುಲ್ಲಾ ನೇತೃತ್ವದಲ್ಲಿ ಬಿಗ್ ರೇಡ್ ನಡೆಸಲಾಗಿದ್ದು, 40ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇನ್ಸ್​ಪೆಕ್ಟರ್​​ ಟೀಂ ರೌಡಿ ಶೀಟರ್​ ಮನೆಗಳನ್ನು ಜಾಲಾಡಿದ್ದು, ಮಾರಕಾಸ್ತ್ರ ಸೇರಿದಂತೆ ಹಲವು ವಸ್ತುಗಳ ಪರಿಶೀಲನೆ ನಡೆಸಿದೆ.

ಇನ್ನು ರೌಡಿಶೀಟರ್​ಗಳಿಗೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗದಂತೆ ವಾರ್ನಿಂಗ್​​ ನೀಡಿದ್ದು, ಭಾಗಿಯಾದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂಬ ಎಚ್ಚರಿಕೆಯನ್ನೂ​​ ಪೊಲೀಸರು ನೀಡಿದ್ದಾರೆ. ನವನಗರ APMC ಠಾಣಾ ವ್ಯಾಪ್ತಿಯಲ್ಲಿ ಹಾಗೂ ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ರೇಡ್ ನಡೆಸಲಾಗಿತ್ತು.

ಇದನ್ನೂ ಓದಿ : ಹಣ ಡಬ್ಲಿಂಗ್‌ ಪ್ರಕರಣ : ಕೋಟಿ ಕೋಟಿ ವಂಚನೆ ಮಾಡಿದ್ದ ಆರೋಪಿಗಳು ಕೋರ್ಟ್​​ ಮುಂದೆ ಶರಣು..!

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here