ಬಿಜೆಪಿ ನಾಯಕ B.L ಸಂತೋಷ್‌ ವಿರುದ್ಧ ಅವಹೇಳನ – ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್​!

ಮಂಗಳೂರು : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ರಾಜೀವ್‌ ಕುಲಾಲ್‌ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BSN 196 (1), 352, 353 (2) ಸೆಕ್ಷನ್‌ಗಳ ಅಡಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಪ್ರಕರಣ ದಾಖಲಾಗಿತ್ತು. ಭಾರೀ ಹೈಡ್ರಾಮಾದ ಬಳಿಕ ಪೊಲೀಸರು ಇದೀಗ ಮಹೇಶ್ ಶೆಟ್ಟಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 8 ವಾಹನಗಳಲ್ಲಿ ತಿಮರೋಡಿ ನಿವಾಸಕ್ಕೆ ತೆರಳಿದ್ದ ಸುಮಾರು 30 ಪೊಲೀಸರ ತಂಡ ಉಜಿರಿಯಲ್ಲಿರುವ ಅವರ ಮನೆಯಲ್ಲೇ ಅರೆಸ್ಟ್​ ಮಾಡಿದೆ.

ಮಹೇಶ್ ಶೆಟ್ಟಿ ತಿಮರೋಡಿ ತಮ್ಮ ಫೇಸ್ಬುಕ್ ಪೇಜ್‌ನಲ್ಲಿ ಬಿ.ಎಲ್. ಸಂತೋಷ್ ಅವರನ್ನು ನಿಂದಿಸಿ ತೇಜೋವಧೆ ಮಾಡುವಂತಹ ಪೋಸ್ಟ್ ಹಾಕಿದ್ದಾರೆ, ಹಿಂದೂ ಧರ್ಮದ ನಾಯಕರ ಬಗ್ಗೆ ಅವಹೇಳನಕಾರಿ ಶಬ್ದಗಳನ್ನು ಬಳಸಿಕೊಂಡು ಧರ್ಮ ಮತ್ತು ಸಮುದಾಯಗಳ ನಡುವೆ ವೈಮನಸ್ಸು ಹುಟ್ಟಿಸುವ ಪ್ರಯತ್ನ ಮಾಡಿದ್ದಾರೆ ಎಂದು ರಾಜೀವ್ ಕುಲಾಲ್ ಗಂಭೀರ ಆರೋಪ ಮಾಡಿ ತಿಮರೋಡಿ ವಿರುದ್ದ ದೂರು ದಾಖಲಿಸಿದ್ದರು.

ಇದನ್ನೂ ಓದಿ : ಮೈಸೂರು ದಸರಾದಲ್ಲಿ ಏರ್ ಶೋಗೆ ರಕ್ಷಣಾ ಇಲಾಖೆ ಅಸ್ತು – ರಾಜನಾಥ್ ಸಿಂಗ್​ಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ!

Btv Kannada
Author: Btv Kannada

Read More