ಬೆಂಗಳೂರು : BMTC ಬಸ್‌ಗೆ ಮತ್ತೊಂದು ಜೀವ ಬಲಿಯಾಗಿದ್ದು, 10 ವರ್ಷದ ಬಾಲಕಿ ಮೇಲೆ ಬಸ್ ಹರಿದು ಸಾವನ್ನಪ್ಪಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್ ಬಳಿ ನಡೆದಿದೆ. ತನ್ವಿ (10) ಮೃತ ಬಾಲಕಿ.

ತನ್ವಿ ಮಿಲಿಯನಿಯಂ ಸ್ಕೂಲ್‌ನಲ್ಲಿ 5 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ತಾಯಿ ಹರ್ಷಿತಾ ಅವರು ಮಗಳನ್ನು ಸ್ಕೂಲ್‌ಗೆ ಬಿಡಲು ಹೋದಾಗ ಈ ದುರ್ಘಟನೆ ಸಂಭವಿಸಿದೆ.
ಹರ್ಷಿತಾ ಅವರು ಮಗಳನ್ನು ಆಕ್ಟಿವಾದಲ್ಲಿ ಸ್ಕೂಲ್‌ಗೆ ಬಿಡಲು ತೆರಳುತ್ತಿದ್ದಾಗ ಕೋಗಿಲು ಕ್ರಾಸ್ ಬಳಿ ಮಾರುತಿನಗರ ಹತ್ತಿರ ಹೋಗುವಾಗ ಎಡಗಡೆಯಿಂದ ಬಂದ ದ್ವಿಚಕ್ರ ವಾಹನ ಸ್ಕಿಡ್ ಆಗಿ ಬಿದ್ದಿದೆ. ಈ ವೇಳೆ ಬಾಲಕಿ BMTC ಬಸ್ನ ಚಕ್ರದಡಿ ಬಿದ್ದಿದ್ದಾಳೆ. ಆದರೆ ಇದನ್ನು ಗಮನಿಸಿದ ಚಾಲಕ ಹಾಗೇ ಬಸ್ ಚಾಲನೆ ಮಾಡಿದ್ದರಿಂದ ಚಕ್ರ ತಲೆಯ ಮೇಲೆ ಹೋಗಿದೆ. ಇದರಿಂದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇದೀಗ ಯಲಹಂಕ ಪೊಲೀಸರು BMTC ಬಸ್ ಅನ್ನು ವಶಕ್ಕೆ ಪಡೆದಿದ್ದು, ಯಲಹಂಕ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ‘ಸ್ಪಾರ್ಕ್’ ಟೀಸರ್ ರಿಲೀಸ್.. ಸತ್ಯಕ್ಕಾಗಿ ಹೋರಾಟಕ್ಕಿಳಿದ ನಿರಂಜನ್ ಸುಧೀಂದ್ರ!







