ಬೆಂಗಳೂರು : ಧರ್ಮಸ್ಥಳ ದೇವಾಲಯದ ವಿರುದ್ಧ ಅಪಪ್ರಚಾರ ಆರೋಪದಡಿ ಯೂಟ್ಯೂಬರ್ ಸಮೀರ್ ಎಂ.ಡಿ ಅರೆಸ್ಟ್ ಆಗುವ ಸಾಧ್ಯತೆಯಿದೆ. ಈಗಾಗಲೇ ಬೆಂಗಳೂರಿನ ಜಿಗಣಿಯಲ್ಲಿರುವ ಸಮೀರ್ ಮನೆಯನ್ನು ಪೊಲೀಸರು ಸುತ್ತುವರೆದಿದ್ದಾರೆ.

ಕಳೆದ ತಿಂಗಳು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಸಂಬಂಧ ನೋಟಿಸ್ ನೀಡಿದ್ದರೂ ವಿಚಾರಣೆಗೆ ಠಾಣೆಗೆ ಹಾಜರಾಗದ ಹಿನ್ನೆಲೆ ಯೂಟ್ಯೂಬರ್ ಸಮೀರ್.ಎಮ್.ಡಿ ಬಂಧನ ಮಾಡಲು ವಾರೆಂಟ್ ಜತೆಗೆ ಧರ್ಮಸ್ಥಳ ಪೊಲೀಸರು ಜಿಗಣಿಯಲ್ಲಿರುವ ಯೂಟ್ಯೂಬರ್ ಸಮೀರ್.ಎಮ್.ಡಿ ಬಾಡಿಗೆ ಮನೆಗೆ ಬಂದಿದ್ದಾರೆ. ಇನ್ನು ಯಾವುದೇ ಕ್ಷಣದಲ್ಲಿ ಸಮೀರ್ ಅರೆಸ್ಟ್ ಆಗುವ ಸಾಧ್ಯತೆಯಿದೆ.

AI ಬಳಸಿಕೊಂಡು ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡಿರುವ ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ಎಂ. ಡಿ ಹಾಗೂ ದೂತ ಯೂಟ್ಯೂಬ್ ಚಾನೆಲ್ ವಿರುದ್ಧ ಕೂಡ FIR ದಾಖಲಾಗಿದೆ. ಸಮರ್ಥ ಎಂಬುವವರಿಂದ ಧರ್ಮಸ್ಥಳ ಠಾಣೆಯಲ್ಲಿ 12/07/2028 ರಂದು FIR ದಾಖಲಾಗಿದೆ. ಸಮರ್ಥ ಅವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ PSI ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸಮೀರ್ ಎಂ. ಡಿ ಮೇಲೆ BNS u/s 240, 192, 353(1)(b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನ.. ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ!







