ವಾಹನ ಸವಾರರಿಗೆ ಸರ್ಕಾರದಿಂದ ಗುಡ್​ನ್ಯೂಸ್ – ಟ್ರಾಫಿಕ್ ದಂಡ ಪಾವತಿಗೆ 50% ರಿಯಾಯಿತಿ!

ಬೆಂಗಳೂರು : ವಾಹನ ಸವಾರರಿಗೆ ಗುಡ್​ನ್ಯೂಸ್ ಸಿಕ್ಕಿದ್ದು, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018-19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದರು.

ಈ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ರಾಜ್ಯ ಸರ್ಕಾರ, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ.

ಇನ್ನು ಈ ರಿಯಾಯಿತಿಯು ದಿನಾಂಕ 23.08.2025 ರಿಂದ 12.09.2025ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶ ನೀಡಿದೆ.

ಇದನ್ನೂ ಓದಿ : ಅಂತಿಮ ಹಂತದಲ್ಲಿ ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರೀಕರಣ – ಹಳ್ಳಿ ಹುಡುಗಿಯ ಗೆಟಪ್​ನಲ್ಲಿ ರಾಗಿಣಿ ದ್ವಿವೇದಿ!

Btv Kannada
Author: Btv Kannada

Read More