ರೀಲ್ಸ್ ಮಾಡುವಾಗ ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!

ಹಾಸನ : ರೀಲ್ಸ್ ಮಾಡಲು ಹೋಗಿ ಟ್ರ‍್ಯಾಕ್ಟರ್ ಪಲ್ಟಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕಬ್ಬಳ್ಳಿಗೆರೆ ಬೆಟ್ಟದಲ್ಲಿ ನಡೆದಿದೆ. ವಿ.ಜಿ.ಕೊಪ್ಪಲು ಗ್ರಾಮದ ಕಿರಣ್ (19) ರೀಲ್ಸ್ ಹುಚ್ಚಿಗೆ ಬಲಿಯಾದ ಯುವಕ.

ರೀಲ್ಸ್​ಗಾಗಿ ಕಿರಣ್ ವೇಗವಾಗಿ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದ. ಈ ವೇಳೆ ಬೆಟ್ಟದ ತಿರುವಿನಲ್ಲಿ ವೇಗವಾಗಿ ಬಂದ ಟ್ರ್ಯಾಕ್ಟರ್ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಕಿರಣ್ ಮೇಲೆಯೇ ಟ್ರ್ಯಾಕ್ಟರ್ ಉರುಳಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಕೊಣನೂರು ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ : ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ – 4 ದಿನ ನ್ಯಾಯಾಂಗ ಬಂಧನ!

Btv Kannada
Author: Btv Kannada

Read More