ಕೋಲಾರ : ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹುರಿಯಾಳು ಕೆ. ವಿ. ಗೌತಮ್ ಅವರಿಗೆ ಹೀನಾಯ ಸೋಲುಂಟಾಗಿದೆ. ಬಿಜೆಪಿ ಬೆಂಬಲದೊಂದಿಗೆ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಎಂ. ಮಲ್ಲೇಶ್ ಬಾಬು, ಕಾಂಗ್ರೆಸ್ ಅಭ್ಯರ್ಥಿಯನ್ನು ಮಣಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೋಲಾರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಎಸ್. ಮುನಿಸ್ವಾಮಿ ಅವರು ಈ ಬಾರಿ ಸ್ಪರ್ಧೆ ಮಾಡಿಲ್ಲ. ಅವರ ಬದಲಾಗಿ ಎನ್ಡಿಎ ಮೈತ್ರಿ ಕೂಟದ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಅವರಿಗೆ ಟಿಕೆಟ್ ನೀಡಲಾಗಿತ್ತು. ಇದೀಗ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಜಯಭೇರಿ ಬಾರಿಸಿದ್ದಾರೆ.
ಇದನ್ನೂ ಓದಿ : ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣಗೆ ಭರ್ಜರಿ ಗೆಲುವು..!
Post Views: 15