ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯಗೆ ತೀವ್ರ ಹಿನ್ನಡೆಯಾಗಿದೆ.
ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ವಿರುದ್ಧ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು. ಉತ್ತರ ಕನ್ನಡ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಿದೆ. ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಕಾಗೇರಿ 2,33,205 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಇದನ್ನೂ ಓದಿ : ಹಾಸನಲ್ಲಿ ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲು – ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್..!
Post Views: 134