ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ವಿರುದ್ಧ ಸ್ಪರ್ಧಿಸಿರುವ ಡಾ.ಕೆ ಸುಧಾಕರ್ ಅವರು 1,63,460 ಮತಗಳ ಅಂತರದಲ್ಲಿ ಜಯ ದಾಖಲಿಸಿದ್ದಾರೆ. ಈ ಹಿನ್ನಲೆ ಇದೀಗ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯ ಕೇಳಿ ಬರುತ್ತಿದೆ.
ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ 1 ವೋಟ್ ಕೂಡಾ ಲೀಡ್ ಕೊಡಲ್ಲ, 1 ವೋಟ್ ಲೀಡ್ ಕೊಟ್ರೂ ರಾಜೀನಾಮೆ ಕೊಡ್ತೇನೆ ಎಂದು ಪ್ರದೀಪ್ ಈಶ್ವರ್ ಹೇಳಿದ್ದರು. ಹಾಗಾಗಿ ಪ್ರದೀಪ್ ಈಶ್ವರ್ ರಾಜೀನಾಮೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.
ಈಗ ಖುದ್ದು ಪ್ರದೀಪ್ ಈಶ್ವರ್ ಕ್ಷೇತ್ರದಲ್ಲೇ ಸುಧಾಕರ್ ಮುನ್ನಡೆ ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಧಾಕರ್ 19 ಸಾವಿರ ಲೀಡ್ ಪಡೆದಿದ್ದು, ಸವಾಲ್ ಹಾಕಿ ಸೋತ ಪ್ರದೀಪ್ ಈಶ್ವರ್ ಇಂದೇ ರಾಜೀನಾಮೆ ನೀಡುವಂತೆ ಒತ್ತಾಯ ಕೇಳಿ ಬರುತ್ತಿದೆ.
ಇದನ್ನೂ ಓದಿ : ಸುರಪುರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ್ಗೆ ಭರ್ಜರಿ ಗೆಲುವು..!