ಬೆಂಗಳೂರು : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ. ಉತ್ತರ ಭಾರತದ ರಾಜ್ಯಗಳಲ್ಲೂ ಮೋದಿ ಹಾಗೂ ರಾಮಮಂದಿರದ ಅಲೆ ಇಲ್ಲವಾಗಿದೆ ಎಂಬುದನ್ನು ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶ ಕುರಿತಂತೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷನಾಗಿ ರಾಜ್ಯ ಹಾಗೂ ದೇಶದಲ್ಲಿ ಜನರ ತೀರ್ಪನ್ನು ಗೌರವಿಸುತ್ತೇನೆ. ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಂತಾಗಿದೆ. ದೇಶದಲ್ಲಿ ಭಾವನೆ ಸೋತಿದ್ದು, ಬದುಕು ಗೆದ್ದಿದೆ. ಬಿಜೆಪಿಯವರು 400 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಅದು ಸಾಧ್ಯವಾಗಿಲ್ಲ. ಅಯೋಧ್ಯೆಯಲ್ಲೇ ಬಿಜೆಪಿ ಸೋತಿದೆ. ರಾಜ್ಯದಲ್ಲಿ ನಾವು 1 ಸ್ಥಾನದಿಂದ 9 ಸ್ಥಾನಗಳಿಗೆ ಏರಿಕೆ ಕಂಡಿದ್ದೇವೆ. ನಾವು 14 ಸ್ಥಾನಗಳ ನಿರೀಕ್ಷೆಯಲ್ಲಿದ್ದೆವು ಎಂದರು.
ನನ್ನ ಕ್ಷೇತ್ರದಲ್ಲಿ ಡಾ.ಮಂಜುನಾಥ್ ಅವರ ಗೆಲುವಿಗೆ ವೈಯಕ್ತಿಕವಾಗಿ ಅವರಿಗೆ ಅಭಿನಂದಿಸುತ್ತೇನೆ. ಅವರ ಪಕ್ಷ ಗೆಲ್ಲುವುದಕ್ಕಿಂತ ಇಲ್ಲಿ ವ್ಯಕ್ತಿ ಗೆದ್ದಿದ್ದಾರೆ. ಬಹಳ ಲೆಕ್ಕಾಚಾರದಲ್ಲಿ ಅವರನ್ನು ಬಿಜೆಪಿಯಿಂದ ಸ್ಪರ್ಧಿಸುವಂತೆ ಮಾಡಿದ್ದರು. ಇಷ್ಟು ದೊಡ್ಡ ಅಂತರದ ಸೋಲಿನ ನಿರೀಕ್ಷೆ ಮಾಡಿರಲಿಲ್ಲ. ನನ್ನ ತಮ್ಮ ಉತ್ತಮ ಕೆಲಸ ಮಾಡಿದ್ದು, ಆಡಳಿತ ವಿರೋಧಿ ಅಲೆ ಇರಲಿಲ್ಲ. ಆದರೆ ಮಂಜುನಾಥ್ ಅವರಿಗೆ ಅವಕಾಶ ನೀಡಬೇಕು ಎಂದು ಜನ ಅವರನ್ನು ಗೆಲ್ಲಿಸಿದ್ದಾರೆ. ಎಂದು ಹೇಳಿದ್ದಾರೆ.
ಇದನ್ನೂ ಓದಿ : ಮೂರನೇ ಬಾರಿ ಎನ್ಡಿಎಗೆ ಆಶೀರ್ವಾದ ಸಿಕ್ಕಿದೆ – ದೇಶದ ಜನತೆಗೆ ಪ್ರಧಾನಿ ಮೋದಿ ಕೃತಜ್ಞತೆ..!