ಕ್ರಿಕೆಟ್ ಲೋಕದ ಬದ್ಧ ವೈರಿಗಳ ಮಹಾ ಕಾದಾಟಕ್ಕೆ ವೇದಿಕೆ ಸಜ್ಜಾಗಿದ್ದು, ಇಂದು (ಜೂನ್ 9) ಭಾರತ ಹಾಗೂ ಪಾಕಿಸ್ತಾನ ತಂಡಗಳು ಐಸಿಸಿ ಟಿ20 ವಿಶ್ವಕಪ್ ಯುದ್ಧದಲ್ಲಿ ಹೋರಾಡಲಿವೆ. ಈ ವಿಶ್ವಕಪ್‌ನ ಬಹುನಿರೀಕ್ಷಿತ ಪಂದ್ಯ ಇದ್ದಾಗಿದ್ದು, ಉಭಯ ತಂಡಗಳು 2 ವರ್ಷಗಳ ಬಳಿಕ ಕ್ರಿಕೆಟ್ ಯುದ್ಧಭೂಮಿಯಲ್ಲಿ ಎದುರಾಗಲಿರುವ ಕಾರಣ ಪಂದ್ಯ ಭಾರೀ ಮಹತ್ವ ಪಡೆದುಕೊಂಡಿದೆ.
ಭಾರತ ಮತ್ತು ಪಾಕಿಸ್ತಾನ ನಡುವಣ ಈ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ರೆಡಿಯಾಗಿದ್ದು, ನ್ಯೂಯಾರ್ಕ್ನ ನಸ್ಸೌ ಸ್ಟೇಡಿಯಂನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನ 19ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದಾರೆ.
ವಿಶ್ವಕಪ್‌ನಲ್ಲಿ ಈ ಉಭಯ ತಂಡಗಳ ನಡುವೆ ನಡೆಯುವ ಹೈವೋಲ್ಟೇಜ್ ಕದನಕ್ಕೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಒಂದೆಡೆ, ಟೀಂ ಇಂಡಿಯಾ 2024 ರ ಟಿ20 ವಿಶ್ವಕಪ್‌ನಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮತ್ತೊಂದೆಡೆ, ಪಾಕಿಸ್ತಾನ ತಂಡವು ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ವಿರುದ್ಧ ಹೀನಾಯ ಸೋಲು ಕಂಡಿದೆ. ಹೀಗಿರುವಾಗ ಇಂದು ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿದ್ದು, ಯಾವ ಮಟ್ಟದ ಕ್ರಿಕೆಟ್ ಪಂದ್ಯ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.
ಇಂಡೋ-ಪಾಕ್ ಹೈ ಥ್ರಿಲ್ಲಿಂಗ್ ಗೇಮ್ ಎದೆ ಬಡಿತ ಹೆಚ್ಚಿಸಿದ್ದು, ಸೋಲು-ಗೆಲುವಿನ ಲೆಕ್ಕಚಾರವು ಜೋರಾಗಿದೆ. ಬದ್ಧವೈರಿ ಪಾಕ್ ಪಾಕ್ ಎಷ್ಟೇ ತಿಪ್ಪರಲಾಗ ಹಾಕಿದ್ರೂ ಸಂಡೇ ಬ್ಯಾಟಲ್ನಲ್ಲಿ ಭಾರತಕ್ಕೆ ಗೆಲುವು ಪಕ್ಕಾ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.
ಎಷ್ಟು ಗಂಟೆಗೆ ಪಂದ್ಯ ಶುರು? ಭಾರತ ಮತ್ತು ಪಾಕ್ ನಡುವಣ ಪಂದ್ಯ ಯುಎಸ್ಎ ಕಾಲಮಾನ ಬೆಳಿಗ್ಗೆ 10.30 ರಿಂದ ಶುರುವಾಗಲಿದೆ. ಅಂದರೆ ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಪಂದ್ಯ ಆರಂಭವಾಗಲಿದೆ.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ? ಸ್ಟಾರ್ ಸ್ಪೋರ್ಟ್ ನೆಟ್ವರ್ಕ್ನ ಚಾನೆಲ್ಗಳಲ್ಲಿ ಪಂದ್ಯದ ನೇರ ಪ್ರಸಾರ ಇರಲಿದೆ. ಹಾಗೆಯೇ ಡಿಸ್ನಿ ಹಾಟ್ ಸ್ಟಾರ್ ವೆಬ್ಸೈಟ್ನಲ್ಲೂ ಲೈವ್ ವೀಕ್ಷಿಸಬಹುದು. ಡಿಸ್ನಿ ಹಾಟ್ ಸ್ಟಾರ್ ಮೊಬೈಲ್ ಆ್ಯಪ್ನಲ್ಲಿ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದು.
ಇದನ್ನೂ ಓದಿ : ಶಿವರಾಜ್ ಕೆಆರ್ ಪೇಟೆ ನಟಿಸಲಿರುವ ಹೊಸ ಚಿತ್ರಕ್ಕೆ ಮುಹೂರ್ತ : ನಿರ್ಮಾಣದ ಜವಬ್ದಾರಿ ಹೊತ್ತ ಶ್ರೇಯ ಪ್ರೊಡಕ್ಷನ್ಸ್..!