ಬೆಂಗಳೂರು : ದಾರಿ ಬಿಡುವ ಸಂದರ್ಭದಲ್ಲಿ ಬೈಕ್ ಮತ್ತು ಕಾರು ಚಾಲಕನ ಮಧ್ಯೆ ಜಗಳ ನಡೆದಿರುವ ಘಟನೆ ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಕ್ಕೂರಿನಲ್ಲಿ ಯೂ ಟರ್ನ್ ಮಾಡುವ ವೇಳೆ ಕಾರು ಚಾಲಕ ಪ್ರವೀಣ್ ಹಾಗೂ ದ್ವಿಚಕ್ರ ವಾಹನ ಸವಾರನ ನಡುವೆ ಕಿರಿಕ್ ನಡೆದಿದೆ.
ಈ ವೇಳೆ ಕಾರನ್ನು ಅಡ್ಡ ಹಾಕಿ ಕಾರ್‌ನ ಬಾನೆಟ್‌ಗೆ ಒದ್ದು ಬೈಕ್ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಫಾಲೋ ಮಾಡಿಕೊಂಡು ಬಂದಿದ್ದ ದ್ವಿಚಕ್ರ ವಾಹನ ಸವಾರ ಶ್ರೀರಾಮಪುರ ವಿಲೇಜ್ ಬಳಿಯೂ ಕಿರಿಕ್ ಮಾಡಿದ್ದಾನೆ.
ಕಾರ್ ಡ್ಯಾಷ್ ಕ್ಯಾಮ್ ಬೈಕ್ ಸವಾರನ ಕೃತ್ಯ ಸೆರೆಯಾಗಿದೆ. ಈ ಮೂಲಕ ನಗರದಲ್ಲಿ ನಡೆಯುತ್ತಿರುವ ರೋಡ್ ರೇಜ್‌ಗೆ ಮತ್ತೊಂದು ಘಟನೆ ಸೇರ್ಪಡೆಯಾದಂತಾಗಿದೆ.
ಇದನ್ನೂ ಓದಿ : ನಗರದಲ್ಲಿ ಬೀಡು ಬಿಟ್ಟಿದೆ ತುಪ್ಪ ಕಳ್ಳತನ ಮಾಡೋ ಗ್ಯಾಂಗ್ : ನಂದಿನಿ ಪಾರ್ಲರ್, ಸೂಪರ್ ಮಾರ್ಕೆಟ್ಗಳೇ ಇವರ ಟಾರ್ಗೆಟ್..!
Post Views: 69