ಸುಡಾನ್‌ನಲ್ಲಿ ಭಾರೀ ಭೂಕುಸಿತಕ್ಕೆ ಇಡೀ ಗ್ರಾಮವೇ ನೆಲಸಮಾಧಿ.. 1000ಕ್ಕೂ ಹೆಚ್ಚು ಜನ ಬಲಿ!

ಕೈರೋ : ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂಕುಸಿತವು ಇಡೀ ಗ್ರಾಮವನ್ನು ನೆಲಸಮಗೊಳಿಸಿದ್ದು, 1,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ.

ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮ ಭೂಕುಸತಕ್ಕೆ ಬಲಿಯಾಗಿದೆ. ಗ್ರಾಮದಲ್ಲಿ ಕೆಲ ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗಿತ್ತು. ಅದರ ಬೆನ್ನಲ್ಲೇ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್‌ಮೆಂಟ್/ಆರ್ಮಿ (ಎಸ್‌ಎಲ್‌ಎಂ) ತಿಳಿಸಿದೆ.

ಭೂಕುಸಿತದ ಪರಿಣಾಮ ಇಡೀ ಹಳ್ಳಿಯೇ ಭೂಸಮಾಧಿಯಾಗಿದೆ. 1,000ಕ್ಕೂ ಹೆಚ್ಚು ಜನರು ದುರಂತದಲ್ಲಿ ಸಾವನ್ನಪ್ಪಿದ್ದಾರೆ.  ಮಣ್ಣು ಮತ್ತು ಅವಶೇಷಗಳ ಅಡಿಯಲ್ಲಿ ಇನ್ನೂ ಹೂತುಹೋಗಿರುವ ಸತ್ತವರನ್ನು ಹೊರತೆಗೆಯಲು ಸಹಾಯ ಮಾಡುವಂತೆ ವಿಶ್ವಸಂಸ್ಥೆ ಮತ್ತು ಇತರ ನೆರವು ಸಂಸ್ಥೆಗಳಿಗೆ ಮನವಿ ಮಾಡಲಾಗಿದೆ.

ಸೂಡಾನ್ ಸೇನೆ ಮತ್ತು ಕ್ಷಿಪ್ರ ಅರೆಸೈನಿಕ ಪಡೆಗಳ (RSF)ನಡುವಿನ ರಕ್ತಸಿಕ್ತ ಅಂತರ್ಯುದ್ಧದಲ್ಲಿ ಸಿಲುಕಿಕೊಂಡಿದ್ದು, ಇದು ದೇಶವನ್ನು ವಿಶ್ವದ ಅತ್ಯಂತ ಕೆಟ್ಟ ಮಾನವೀಯ ಬಿಕ್ಕಟ್ಟಿನಲ್ಲಿ ಸಿಲುಕಿಸಿದೆ.

ಇದನ್ನೂ ಓದಿ : ಧರ್ಮಸ್ಥಳದ ಬಗ್ಗೆ ಅಪಪ್ರಚಾರ, ಕೋಮುಗಲಭೆ ಸೃಷ್ಟಿಗೆ ವಿದೇಶಿ ಹಣ ಬಳಕೆ ಆರೋಪ – ಸದ್ದಿಲ್ಲದೇ ತನಿಖೆ ಚುರುಕುಗೊಳಿಸಿದ ED!

Btv Kannada
Author: Btv Kannada

Read More