ಟಿಡಿಪಿ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಚಂದ್ರಬಾಬು ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ, ಪವನ್ ಕಲ್ಯಾಣ್ ಅವರು ಉಪಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು. ಇವರೊಂದಿಗೆ 25 ಮಂದಿ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದರು.
ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೆ.ಪಿ ನಡ್ಡಾ, ನಿತಿನ್ಗಡ್ಕರಿ ಸೇರಿದಂತೆ ಹಲವು ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಸಿಎಂಗಳು, ಪ್ರಮುಖ ನಟರಾದ ಚಿರಂಜೀವಿ, ರಜನಿಕಾಂತ್ ಮುಂತಾದವರು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರದಲ್ಲಿ ಭಾಗವಹಿಸಿದ್ದಾರೆ. ವಿಜಯವಾಡದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಾಂತರ ಕಾರ್ಯಕರ್ತರು ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ.
ಈ ಬಾರಿ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲ 175 ಸ್ಥಾನಗಳ ಪೈಕಿ 135ಸ್ಥಾನಗಳನ್ನು ಗೆಲ್ಲುವ ಮೂಲಕ ಟಿಡಿಪಿ ಸಂಪೂರ್ಣ ಬಹುಮತ ಸಾಧಿಸಿದೆ. ಇನ್ನು ಒಡಿಶಾದಲ್ಲಿ ಬಿಜೆಪಿ 147ರಲ್ಲಿ 78 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಸಾಧಿಸಿದೆ.
ಇದನ್ನೂ ಓದಿ : ರಂಗಭೂಮಿ ಕಲಾವಿದರ ‘ಸಾಮ್ರಾಟ್ ಮಾಂಧಾತ’ಕ್ಕೆ ಸುವರ್ಣ ಸಂಭ್ರಮ..!