ಬೆಂಗಳೂರು : ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ರವಿಕುಮಾರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಭೋವಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಅವರು ಸುದ್ದಿಗೋಷ್ಠಿ ನಡೆಸಿ ಭ್ರಷ್ಟಾಚಾರದ ಬಗ್ಗೆ ಗಂಭೀರ ಆರೋಪ ಮಾಡಿದರು. ಅಲ್ಲದೇ ವಿಪಕ್ಷ ಬಿಜೆಪಿ ನಾಯಕರು ಸಹ ಈ ಬಗ್ಗೆ ಧ್ವನಿ ಎತ್ತಿದ್ದರು. ಈ ಪ್ರಕರಣ ರಾಜಕೀಯವಾಗಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಿಎಂ, ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ ನೀಡಿದ್ದಾರೆ.
ಯೋಜನೆಗಳಡಿ ಸವಲತ್ತು ಒದಗಿಸಿಕೊಡಲು ರವಿಕುಮಾರ್ ಶೇಕಡ 60 ರಷ್ಟು ಲಂಚ ಕೇಳುತ್ತಿದ್ದಾರೆ ಎಂದು ಭಾರತೀಯ ಭೋವಿ ಸಮಾಜ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಮೌರ್ಯ ಗಂಭೀರ ಆರೋಗ್ಯ ಮಾಡಿದ್ದರು. 2021-22 ರಲ್ಲಿ ನಿಗಮದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಮಧ್ಯವರ್ತಿಗಳೊಂದಿಗೆ ಶಾಮೀಲಾಗಿ 85 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಸಿದ್ದರು ಎಂದು ಆರೋಪಿಸಿದ್ದರು.
ಇದನ್ನೂ ಓದಿ : ಒಡನಾಡಿ ನಿರ್ದೇಶಕ ಸ್ಟ್ಯಾನ್ಲಿ ವಿರುದ್ಧ ಅಪಪ್ರಚಾರ ಆರೋಪ – ವಿಜಯನಗರ ಠಾಣೆಯಲ್ಲಿ ವಸಂತ್ ಗಿಳಿಯಾರ್ ವಿರುದ್ಧ FIR!







