ಆನೇಕಲ್ : 11 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಪ್ರಿಯಕರನೊಂದಿಗೆ ಮೂರು ಮಕ್ಕಳ ತಾಯಿ ಎಸ್ಕೇಪ್ ಆಗಿರುವ ಘಟನೆ ಬನ್ನೇರುಘಟ್ಟ ಸಮೀಪದ ಬಸವನಪುರ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ್ ಎಂಬಾತನನ್ನು ಲೀಲಾವತಿ ಪ್ರೀತಿಸಿ ಮದುವೆಯಾಗಿದ್ದಳು. ದಂಪತಿಗೆ 2 ಗಂಡು ಮಕ್ಕಳು, ಒಂದು ಹೆಣ್ಣು ಮಗು ಇದೆ. ಆದರೂ ಮೂರು ಮಕ್ಕಳ ತಾಯಿ ಲೀಲಾವತಿ ಮತ್ತೋರ್ವನ ಜೊತೆ ಓಡಿಹೋಗಿದ್ದಾಳೆ.
ಲೀಲಾವತಿ ಆ.31ರಂದು ಪ್ರಿಯಕರನೊಂದಿಗೆ ಓಡಿ ಹೋಗಿದ್ದಾಳೆ. ಪತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ ನಂತರ ಆಕೆಯೂ ಪೊಲೀಸ್ ಠಾಣೆಗೆ ಬಂದಿದ್ದಾಳೆ. ಬಳಿಕ ಪ್ರಿಯಕರನೇ ಬೇಕೆಂದು ಆತನೊಂದಿಗೆ ಹೋಗಿದ್ದಾಳೆ. ಈಗ ನನ್ನನ್ನು ಬಿಟ್ಟು ಮತ್ತೊಬ್ಬನ ಹಿಂದೆ ಹೋಗಿದ್ದಾಳೆ ಎಂದು ಗಂಡ ಗೋಳಾಡಿದ್ದಾನೆ.
ಬಸವನಪುರದಲ್ಲಿ ವಾಸವಿದ್ದ ಲೀಲಾವತಿ, ಮಂಜುನಾಥ್ ದಂಪತಿ 11 ವರ್ಷಗಳ ಹಿಂದೆ ಪ್ರೀತಿಸಿ ಮದ್ವೆಯಾಗಿದ್ದರು. ಮಂಜುನಾಥ್ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಕಳೆದ 2 ವರ್ಷಗಳ ಹಿಂದೆ ಲೀಲಾವತಿಗೆ ಪ್ರಿಯಕರ ಸಂತೋಷ್‌ನ ಪರಿಚಯವಾಗಿತ್ತು. ಇಬ್ಬರ ನಡುವೆ ಸಲುಗೆ ಹೆಚ್ಚಾಗಿ ಅಕ್ರಮ ಸಂಬಂಧ ಬೆಳೆದಿತ್ತು. ಸಾಕಷ್ಟು ಬಾರಿ ಮಂಜುನಾಥ್ ಇದನ್ನ ಪ್ರಶ್ನೆ ಮಾಡಿದ್ದ. ಆದರೂ ಬುದ್ಧಿ ಕಲಿಯದ ಲೀಲಾವತಿ ಭಾನುವಾರ ಮನೆಯಿಂದ ಎಸ್ಕೇಪ್ ಆಗಿದ್ದಾಳೆ. ಈ ಕುರಿತು ಪತಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಬಳಿಕ ಠಾಣೆಗೆ ಹಾಜರಾದ ಲೀಲಾವತಿ ತನಗೆ ಪ್ರಿಯಕರನೇ ಬೇಕೆಂದು ತಾಳಿ ಕಿತ್ತು ಗಂಡನ ಕೈಗೆ ಕೊಟ್ಟು ಹೋಗಿದ್ದಾಳೆ.
ಇದನ್ನೂ ಓದಿ : ಧರ್ಮಸ್ಥಳ ಕೇಸಲ್ಲಿ ಯೂಟ್ಯೂಬರ್ ಚಂದನ್ ಗೌಡ ಹಣ ಪಡೆದ ಗಂಭೀರ ಆರೋಪ – ಇದು ಯೂಟ್ಯೂಬರ್ಸ್ಗಳ ‘ಧರ್ಮ’ದ ಹಣದ ಕಚ್ಚಾಟ!







