ಧರ್ಮಸ್ಥಳ ಷಡ್ಯಂತ್ರ ಕೇಸ್ – ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ ಶಶಿಕಾಂತ್ ಸೆಂಥಿಲ್!

ಬೆಂಗಳೂರು : ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದಲ್ಲಿ ತಮಿಳುನಾಡಿನ ಕಾಂಗ್ರೆಸ್ ಸಂಸದ ಮತ್ತು ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರ ಕೈವಾಡವಿದೆ ಎಂದು ಮಾಜಿ ಸಚಿವ, ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದರು. ಈ ಆರೋಪಕ್ಕೆ ಪ್ರತಿಕ್ರಿಯೆಯಾಗಿ, ಸಂಸದ ಶಶಿಕಾಂತ್ ಸೆಂಥಿಲ್ ಅವರು ಜನಾರ್ದನ ರೆಡ್ಡಿ ವಿರುದ್ಧ ಇದೀಗ ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಸೆಂಥಿಲ್ ಮಾನನಷ್ಟ ಅರ್ಜಿ ಸಲ್ಲಿಸಿದ್ದಾರೆ.

ಜನಾರ್ದನ ರೆಡ್ಡಿ ಅವರು ಬೆಂಗಳೂರಿನಲ್ಲಿ ಮಾತನಾಡುತ್ತಾ, ಧರ್ಮಸ್ಥಳ ದೇವಸ್ಥಾನಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಶಶಿಕಾಂತ್ ಸೆಂಥಿಲ್ ದಕ್ಷಿಣ ಕನ್ನಡದ ಇಬ್ಬರು ವ್ಯಕ್ತಿಗಳೊಂದಿಗೆ ಸೇರಿ ಷಡ್ಯಂತ್ರದ ರೂಪರೇಷೆ ಸಿದ್ಧಪಡಿಸಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೇ ಈ ಪ್ರಕರಣದಲ್ಲಿ ಸೆಂಥಿಲ್ ಅವರೇ ಮಾಸ್ಟರ್​ಮೈಂಡ್​ ಎಂದು ರೆಡ್ಡಿ ದೂಷಿಸಿದ್ದರು. ಜೊತೆಗೆ, ಎಡಪಂಥೀಯ ನಿಲುವು ಹೊಂದಿರುವ ಸೆಂಥಿಲ್ ಅವರನ್ನು ತನಿಖೆಗೆ ಒಳಪಡಿಸಬೇಕೆಂದು ರೆಡ್ಡಿ ಆಗ್ರಹಿಸಿದ್ದರು.

ಇದೀಗ ಜನಾರ್ದನ ರೆಡ್ಡಿಯ ಆರೋಪಗಳನ್ನು ತೀವ್ರವಾಗಿ ಖಂಡಿಸಿರುವ ಶಶಿಕಾಂತ್ ಸೆಂಥಿಲ್, ಈ ಆರೋಪಗಳು ತಮ್ಮ ಗೌರವಕ್ಕೆ ಧಕ್ಕೆ ತಂದಿವೆ ಎಂದು ಹೇಳಿದ್ದಾರೆ. ಈ ಕಾರಣಕ್ಕಾಗಿ, ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಲವರ್ ಜೊತೆ 3 ಮಕ್ಕಳ ತಾಯಿ ಪರಾರಿ – ಇತ್ತ ಹೆಂಡ್ತಿ ಬೇಕೆಂದು ಗೋಳಾಡಿದ ಗಂಡ!

Btv Kannada
Author: Btv Kannada

Read More