ಬೆಂಗಳೂರು : ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ನಡೆದ ಘರ್ಷಣೆ ಇಂದು ತೀವ್ರವಾಗಿದೆ. ಹಿಂದೂ ಪರ ಸಂಘಟನೆ ಕಾರ್ಯಕರ್ತರು ಬೀದಿಗಿಳಿದಿದ್ದು, ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಸ್ಥಳದಲ್ಲಿ ಸದ್ಯ ತೀವ್ರ ಬಿಗುವಿನ ವಾತಾವರಣವನ್ನು ಸೃಷ್ಟಿಯಾಗಿದ್ದು, ಪೊಲೀಸರು ಕಟ್ಟೆಚ್ಚರದ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಇದೀಗ ಈ ಸಂಬಂಧ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯಿಸಿ, ಮದ್ದೂರಿನಲ್ಲಿ ಗಲಾಟೆ ಮಾಡಿದವರನ್ನು ಅರೆಸ್ಟ್ ಮಾಡಿದ್ದೇವೆ ಎಂದಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾತನಾಡಿ, ಸದ್ಯಕ್ಕೆ ಏನೂ ತೊಂದರೆ ಇಲ್ಲ, ಗಣೇಶ ವಿಸರ್ಜನೆ ಮಾಡಿದ್ದಾರೆ. ಸಣ್ಣಪುಟ್ಟ ಗಲಾಟೆ ನಡೆದಿವೆ, ಎಲ್ಲಾ ಕಂಟ್ರೋಲ್ ಮಾಡಿದ್ದೇವೆ. ಶಾಂತಿ ನೆಲೆಸಲು ಎರಡೂ ಸಮುದಾಯಗಳು ಸಹಕರಿಸಬೇಕು. ಮದ್ದೂರಿನಲ್ಲಿ ಎಲ್ಲಾ ರೀತಿಯಲ್ಲೂ ನಾವು ಭದ್ರತೆ ಮಾಡಿದ್ದೇವೆ ಎಂದರು.
ಪೊಲೀಸರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ತಾರೆ, ಎಲ್ಲಾ ಜಿಲ್ಲೆಗಳಿಗೂ ಹಿರಿಯ ಅಧಿಕಾರಿಗಳನ್ನು ನಿಯೋಜಿಸಿದ್ದೇವೆ. ಬಿಜೆಪಿ-ಜೆಡಿಎಸ್ ಪ್ರತಿಭಟನೆ ಮಾಡಲಿ ಬಿಡಿ ಎಂದು ಡಾ.ಜಿ ಪರಮೇಶ್ವರ್ ಹೇಳಿದರು.
ಇದನ್ನೂ ಓದಿ : ಯಾವ್ದೇ ಒತ್ತಡಕ್ಕೆ ಮಣಿದರೆ ನಾನೇ ಮದ್ದೂರಿಗೆ ಬರಬೇಕಾಗುತ್ತದೆ – ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿಗೆ HDK ವಾರ್ನಿಂಗ್!







