Download Our App

Follow us

Home » ಸಿನಿಮಾ » ಅಪರಾಧಿಗೆ ಶಿಕ್ಷೆ ಆಗಲಿ, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ – ದರ್ಶನ್‌ ಬಂಧನದ ಬಗ್ಗೆ ಕಿಚ್ಚ ಸುದೀಪ್‌ ಫಸ್ಟ್​ ರಿಯಾಕ್ಷನ್..!

ಅಪರಾಧಿಗೆ ಶಿಕ್ಷೆ ಆಗಲಿ, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ – ದರ್ಶನ್‌ ಬಂಧನದ ಬಗ್ಗೆ ಕಿಚ್ಚ ಸುದೀಪ್‌ ಫಸ್ಟ್​ ರಿಯಾಕ್ಷನ್..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್​ ಆಗಿದ್ದಾರೆ. ಈಗಾಗಲೇ ದರ್ಶನ್ ಸೇರಿ 15ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ನಟ ಕಿಚ್ಚ ಸುದೀಪ್​​ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಪ್ರಕರಣವನ್ನು ನಾನು ಒಬ್ಬ ಕಾಮನ್​ ಮ್ಯಾನ್​​ ರೀತಿ ನೋಡುತ್ತಿದ್ದೇನೆ. ಅವರ ಪರ ಇವರ ಪರ ಮಾತನಾಡುವುದು ತಪ್ಪಾಗುತ್ತದೆ. ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ಹಾಗೂ ಹುಟ್ಟಬೇಕಾಗಿರುವ ಅವರ ಮಗುವಿಗೆ, ಪತ್ನಿಗೆ ನ್ಯಾಯ ಸಿಗಬೇಕು. ಕಾನೂನಿನ ಮೇಲೆ ನಂಬಿಕೆ ಬರುವ ಕೆಲಸ ಆಗಬೇಕು ಎಂದು ಹೇಳಿದ್ದಾರೆ.

ದರ್ಶನ್‌ ಬಂಧನದ ಬಗ್ಗೆ ಪ್ರತಿಕ್ರಿಯಿಸಿ, ನೀವು ಮಾಧ್ಯಮಗಳಲ್ಲಿ ಏನು ತೋರಿಸುತ್ತಿದ್ದೀರಿ ಅಷ್ಟು ಮಾತ್ರ ನನಗೆ ಗೊತ್ತು. ಮಾಧ್ಯಮ, ಪೊಲೀಸ್ ಸಿಬ್ಬಂದಿ ಪ್ರಯತ್ನದಿಂದ ಸತ್ಯಾಂಶಗಳು ಬೆಳಕಿಗೆ ಬಂದಿವೆ. ಸಿಎಂ ಹಠ ಹಿಡಿದು ಕುಳಿತ ಮೇಲೆ ಈ ಕೇಸ್ ಎಫೆಕ್ಟ್ ಗೊತಾಗ್ತಿದೆ.

ವಾತಾವರಣ ಏನೋ ಸರಿ ಕಾಣಿಸುತ್ತಿಲ್ಲ. ಚಿತ್ರರಂಗಕ್ಕೆ ನ್ಯಾಯ ಸಿಗಬೇಕಿದೆ. ಯಾರೇ ಆಗಿರಲಿ ಚಿತ್ರರಂಗಕ್ಕೆ ಕಪ್ಪು ಚುಕ್ಕೆ ತರಬಾರದು. ಕನ್ನಡ ಚಿತ್ರರಂಗಕ್ಕೆ ಇತಿಹಾಸವಿದೆ. ಚಿತ್ರರಂಗ ಅಂದ್ರೆ ಒಬ್ಬರು ಇಬ್ಬರಲ್ಲ, ತುಂಬಾ ಜನರ ತ್ಯಾಗದಿಂದ ನಮಗೆ ಈ ಶಕ್ತಿ ಸಿಕ್ಕಿದೆ. ಚಿತ್ರರಂಗಕ್ಕೆ ಕ್ಲೀನ್ ಚಿಟ್ ಸಿಗಬೇಕಿದೆ. ಅಪರಾಧಿಗೆ ಶಿಕ್ಷೆಯಾದರೆ ಚಿತ್ರರಂಗ ಖುಷಿಪಡುತ್ತದೆ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

ಚಿತ್ರರಂಗದಿಂದ ನಟ ದರ್ಶನ್​ ಬ್ಯಾನ್​ ಮಾಡುವ ವಿಚಾರದ ಬಗ್ಗೆ ಮಾತನಾಡಿದ ಅವರು, ದರ್ಶನ್ ಅವರನ್ನು ಬ್ಯಾನ್ ಮಾಡುವುದು ಮುಖ್ಯವಲ್ಲ. ಕೇಸ್​​​​ನಿಂದ ಹೊರಗಡೆ ಬಂದರೆ ಬ್ಯಾನ್ ಅನ್ನೋದು ಬರೋದಿಲ್ಲ. ಜಸ್ಟೀಸ್ ಸಿಗುವುದು ಮುಖ್ಯ. ಆರೋಪಿ ಯಾರು ಅಂತ ಹೇಳೋಕೆ ಜಡ್ಜ್ ಇದ್ದಾರೆ. ನಾವ್ಯಾರು ಕಾನೂನಲ್ಲ. ನ್ಯಾಯಾಲಯದಿಂದ ಬರುವ ತೀರ್ಪಿಗೆ ನಾವೆಲ್ಲಾ ತಲೆಬಾಗಬೇಕು. ಈಗ ನಮ್ಮ ಕಣ್ಮುಂದೆ ಬರೋದೇ ಆ ಫ್ಯಾಮಿಲಿ. ಯಾರೇ ಆಗಲಿ ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲೇಬೇಕು ಎಂದು ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ : ರೇಣುಕಾಸ್ವಾಮಿ‌ ಹ*ತ್ಯೆ ಬೆನ್ನಲ್ಲೇ 6 ವರ್ಷದ ಹಿಂದೆ ನಾಪತ್ತೆಯಾದ ದರ್ಶನ್​ ಮ್ಯಾನೇಜರ್​ ಮಲ್ಲಿಕಾರ್ಜುನ ಬರೆದ ಪತ್ರ ವೈರಲ್​? ಏನಿದೆ ಇದರಲ್ಲಿ?

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here