Download Our App

Follow us

Home » ಅಪರಾಧ » ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್​ – ಬಂಧಿತ ಆರೋಪಿ ನಾಗೇಶ್ವರ್ ರಾವ್​ ಮನೆಯಲ್ಲಿ 1.49 ಕೋಟಿ ಹಣ ಜಪ್ತಿ..!

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್​ – ಬಂಧಿತ ಆರೋಪಿ ನಾಗೇಶ್ವರ್ ರಾವ್​ ಮನೆಯಲ್ಲಿ 1.49 ಕೋಟಿ ಹಣ ಜಪ್ತಿ..!

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ರೂಪಾಯಿ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಎಸ್‌ಐಟಿ, ಇದೀಗ ಮತ್ತಷ್ಟು ಹಣ ಜಪ್ತಿ ಮಾಡಿಕೊಂಡಿದೆ. ಬಂಧಿತ ಆರೋಪಿ ನಾಗೇಶ್ವರ್​ ಮನೆಯಿಂದ 1.49 ಕೋಟಿ ರೂ. ಜಪ್ತಿ ಮಾಡಿದ್ದಾರೆ. ಈ ಹಣವನ್ನು ಜಕ್ಕೂರಿನ ಮನೆಯಲ್ಲಿ ಇಡಲಾಗಿತ್ತು. ಮನೆ ಮೇಲೆ ದಾಳಿ ನಡೆಸಿದ SIT ಅಧಿಕಾರಿಗಳ ತಂಡವು ಹಣ ಜಪ್ತಿ ಮಾಡಿಕೊಂಡಿದೆ.

ಈ ಹಿಂದೆ ಆರೋಪಿ ಸತ್ಯನಾರಾಯಣ್ ವರ್ಮಾ ಎಂಬುವವರನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿತ್ತು. ಅವರಿಂದ 12 ಕೋಟಿ ನಗದು ಜಪ್ತಿ ಮಾಡಿಕೊಳ್ಳಲಾಗಿತ್ತು. ನಿಗಮದ ಮಾಜಿ ವ್ಯವಸ್ಥಾಪಕನ ಆಪ್ತನ ಬಳಿಯಿಂದ 30 ಲಕ್ಷ ಜಪ್ತಿ ಮಾಡಿಕೊಳ್ಳಲಾಗಿತ್ತು. ಇದುವರೆಗೂ ಈ ಪ್ರಕರಣದಲ್ಲಿ13.62 ಕೋಟಿಯಷ್ಟು ನಗದು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಂ.ಜಿ.ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ 18 ಖಾತೆಗಳಿಗೆ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈಗಾಗಲೇ ಈ ಪ್ರಕರಣದಲ್ಲಿ ಆರು ಮಂದಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ : ಪೋಕ್ಸೋ ಪ್ರಕರಣ : ಇಂದು ಸಿಐಡಿಯಿಂದ ಮಾಜಿ ಸಿಎಂ ಬಿಎಸ್‌ವೈ ವಿಚಾರಣೆ..!

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here