ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಕೋರಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ದರ್ಶನ್ಗೆ ಬೆಂಗಳೂರು ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.
ದರ್ಶನ್ ಅಂಡ್ ಗ್ಯಾಂಗ್ ಶಿಫ್ಟ್ ಕೋರಿದ್ದ ಜೈಲು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 64ನೇ ಸಿಸಿಎಚ್ ಕೋರ್ಟ್ ವಜಾ ಮಾಡಿ, ಆರೋಪಿಗಳನ್ನು ಬೆಂಗಳೂರಿನಲ್ಲಿ ಇರಿಸುವಂತೆ ಆದೇಶ ಹೊರಡಿಸಿದೆ.
ನಟ ದರ್ಶನ್ ಪರ ವಕೀಲರು ಕೂಡ ದರ್ಶನ್ ಗ್ಯಾಂಗ್ ಅನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಲು ವಿರೋಧಿಸಿದ್ದರು. ಹೀಗಾಗಿ ಈಗ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಲಿದ್ದಾರೆ. ಇನ್ನು ದರ್ಶನ್ ಪರ ವಕೀಲರು ಸಲಿಸಿದ್ದ ಅರ್ಜಿ ಸ್ವೀಕರ ಮಾಡಿದ ಕೋರ್ಟ್ ಅವರನ್ನು ಜೈಲಿನ ಒಳಗೆ ಓಡಾಡಲು ಕೋರ್ಟ್ ಅನುಮತಿ ನೀಡಿದೆ.
ಇದನ್ನೂ ಓದಿ : “ನನ್ನ ಮಗಳೇ ಸೂಪರ್ ಸ್ಟಾರ್” ಸಿನಿಮಾಗೆ ಚಾಲನೆ – ಚಿತ್ರದ ಪ್ರಮುಖಪಾತ್ರದಲ್ಲಿ ಸೀತಾರಾಮ ಸೀರಿಯಲ್ ಖ್ಯಾತಿಯ ಬೇಬಿ ರೀತುಸಿಂಗ್!
Author: Btv Kannada
Post Views: 301







