Download Our App

Follow us

Home » ರಾಷ್ಟ್ರೀಯ » ಇಂದು ಒಂದೇ ದಿನ ದಾಖಲೆಯ 600 ಪ್ರಕರಣಗಳ ವಿಚಾರಣೆ ನಡೆಸಲಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ..!

ಇಂದು ಒಂದೇ ದಿನ ದಾಖಲೆಯ 600 ಪ್ರಕರಣಗಳ ವಿಚಾರಣೆ ನಡೆಸಲಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ..!

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿರುವ ಏಕಸದಸ್ಯ ಪೀಠವು ಇಂದು 600 ಅರ್ಜಿಗಳ ವಿಚಾರಣೆ ನಡೆಸಲಿದೆ. ಸುಮಾರು ಎರಡು ತಿಂಗಳ ಹಿಂದೆ 608 ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ಹೈಕೋರ್ಟ್‌ನಲ್ಲಿ ನ್ಯಾ. ನಾಗಪ್ರಸನ್ನ ಅವರು ಹೊಸ ದಾಖಲೆ ಬರೆದಿದ್ದರು.

ಇದೀಗ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಇಂದು ಸಿಆರ್​​​ಪಿಸಿ ಸೆಕ್ಷನ್​​ 482ರ ಅಡಿಯಲ್ಲಿ ಪಟ್ಟಿಯಾಗುವಂತಹ ಕ್ರಿಮಿನಲ್​​ ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ. ಇಂದಿನ ಕೋರ್ಟ್​ ಹಾಲ್​​ 19ರ ಜೂನ್​​ 18ರ ಕಾಸ್​​ ಲಿಸ್ಟ್​​ ( ಪ್ರಕರಣಗಳ ಪಟ್ಟಿ) 53 ಪುಟಗಳಷ್ಟಿದ್ದು, ಇದರಲ್ಲಿ 227 ಹೊಸ ಅರ್ಜಿಗಳು ಕೂಡ ಸೇರಿವೆ.

ನಾಗಪ್ರಸನ್ನ ಅವರು 2019ರ ನವೆಂಬರ್ 26ರಂದು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡು 2021ರ ಸೆಪ್ಟಂಬರ್ 8ರಂದು ಕಾಯಂಗೊಂಡಿದ್ದಾರೆ.  ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಇತ್ತೀಚಿನ ದಿನಗಳಲ್ಲಿ ಒಂದು ದಿನದ ಕಲಾಪದ ಅವಧಿಯಲ್ಲಿ  ಅಧಿಕ ಪ್ರಕರಣಗಳ ವಿಚಾರಣೆ ನಡೆಸಿ, ಅರ್ಜಿಗಳ ಇತ್ಯರ್ಥ ಮಾಡುವ ಮೂಲಕ ಸಾರ್ವಜನಿಕರ ಮತ್ತು ವಕೀಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ : ಇಂದು A2 ಆರೋಪಿ ದರ್ಶನ್​​ರನ್ನು ಮೈಸೂರಿಗೆ ಕರೆದೊಯ್ದು ಸ್ಥಳ ಮಹಜರು..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here