ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಸಹಚರರು ಅರೆಸ್ಟ್ ಆಗಿದ್ದಾರೆ. ಸದ್ಯ ಪೊಲೀಸ್ ಕಸ್ಟಡಿಯಲ್ಲಿರು ಕೊಲೆ ಆರೋಪಿ ಪವಿತ್ರಾ ಗೌಡ ಸ್ಟೇಷನ್ನಲ್ಲೇ ಅಸ್ವಸ್ಥಗೊಂಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಆರೋಪಿಗಳ ಪೊಲೀಸ್ ಕಸ್ಟಡಿ ಜೂನ್ 16ಕ್ಕೆ ಅಂತ್ಯವಾಗಲಿತ್ತು. ಈ ಹಿನ್ನೆಲೆಯಲ್ಲಿ ಶನಿವಾರವೇ ಪೊಲೀಸರು ಎಲ್ಲಾ 13 ಆರೋಪಿಗಳನ್ನು 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನ ಜೂನ್ 20ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು.
ಇದೀಗ ಪೊಲೀಸ್ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ವಿಚಾರಣೆ ವೇಳೆ ಸ್ಟೇಷನ್ನಲ್ಲೇ ಅಸ್ವಸ್ಥಗೊಂಡಿದ್ದಾರೆ. ಇನ್ನು ಪೊಲೀಸರು ಅಸ್ವಸ್ಥಗೊಂಡ ಪವಿತ್ರಾಗೌಡರನ್ನು ಪೊಲೀಸರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯದಿದ್ದಾರೆ.
ಇದನ್ನೂ ಓದಿ : ದರ್ಶನ್ ಅರೆಸ್ಟ್ ಬಗ್ಗೆ ನಟಿ ರಚಿತಾ ರಾಮ್ ಏನಂದ್ರು ಗೊತ್ತಾ?
Post Views: 92