ನಟ ಪ್ರಥಮ್​ಗೆ ಬೆದರಿಕೆ ಹಾಕಿದ್ದ ಕೇಸ್ – ರೌಡಿಶೀಟರ್ ಬೇಕರಿ ರಘು ಸೇರಿ ಮತ್ತೋರ್ವ ಆರೋಪಿ ಅರೆಸ್ಟ್!

ನಟ ಪ್ರಥಮ್‌ಗೆ ಡ್ರ್ಯಾಗರ್ ತೋರಿಸಿ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ್ದ ರೌಡಿಶೀಟರ್‌ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನ್ಯಾಯಾಲಯ ವಿಧಿಸಿದ ಷರತ್ತುಗಳ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ರೌಡಿಶೀಟರ್ ಬೇಕರಿ ರಘು ಹಾಗೂ ಯಶಸ್ವಿನಿಯನ್ನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರ ಸಿವಿಲ್ ಕೋರ್ಟ್​​ನಿಂದ ಕಳೆದ ತಿಂಗಳು ಷರತ್ತು ಬದ್ಧ ಜಾಮೀನು ನೀಡಲಾಗಿತ್ತು. ಷರತ್ತಿನಂತೆ ಪ್ರತಿ ಭಾನುವಾರ ಠಾಣೆಗೆ ಬಂದು ರಘು ಸಹಿ ಹಾಕಬೇಕು ಎಂದು ಸೂಚನೆ ನೀಡಲಾಗಿತ್ತು. ಆದರೆ ಈ ಸಂಬಂಧ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘನೆ ಮಾಡಿದ್ದರಿಂದ ರಘು ಹಾಗೂ ಪ್ರಕರಣದ ಮತ್ತೋರ್ವ ಆರೋಪಿ ಯಶಸ್ವಿನಿಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಕಳೆದ ತಿಂಗಳು ಪ್ರಕರಣಕ್ಕೆ ಸಂಬಂಧಿಸಿದಂತೆ, ಬೇಕರಿ ರಘು ಮತ್ತು ಯಶಸ್ವಿನಿ ಎಂಬುವರನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಆದರೆ ಬಂಧನಕ್ಕೂ ಮೊದಲೇ ದೊಡ್ಡಬಳ್ಳಾಪುರ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದರು. ಇದಕ್ಕೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಷರತ್ತು ಉಲ್ಲಂಘನೆ ಮಾಡಿದ ಕಾರಣ ಈಗ ಬಂಧಿಸಲಾಗಿದೆ.

ಇದನ್ನೂ ಓದಿ : ಕೋರ್ಟ್​ ಆದೇಶದ ಬೆನ್ನಲ್ಲೇ ದರ್ಶನ್​ಗೆ ಸಿಕ್ತು ಚಾಪೆ, ದಿಂಬು, 2 ಜಮ್ಖಾನ – ‘ದಾಸ’ನಿಗೆ ಇನ್ನು ಸುಖ ನಿದ್ರೆ!

Btv Kannada
Author: Btv Kannada

Read More