Download Our App

Follow us

Home » ರಾಷ್ಟ್ರೀಯ » ಪರೀಕ್ಷೆಯಲ್ಲಿ ಅಕ್ರಮದ ಶಂಕೆ : ಯುಜಿಸಿ-ನೆಟ್‌ ಪರೀಕ್ಷೆ ರದ್ದುಗೊಳಿಸಿದ ಎನ್‌ಟಿಎ, ಸಿಬಿಐ ತನಿಖೆಗೆ ಆದೇಶ..!

ಪರೀಕ್ಷೆಯಲ್ಲಿ ಅಕ್ರಮದ ಶಂಕೆ : ಯುಜಿಸಿ-ನೆಟ್‌ ಪರೀಕ್ಷೆ ರದ್ದುಗೊಳಿಸಿದ ಎನ್‌ಟಿಎ, ಸಿಬಿಐ ತನಿಖೆಗೆ ಆದೇಶ..!

ದೆಹಲಿ : ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿದೆ ಎಂದು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ ನೀಡಿದ ಪ್ರಾಥಮಿಕ ಮಾಹಿತಿಯಂತೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಜೂ.18ರಂದು ನಡೆದಿದ್ದ UGC-NET ಪರೀಕ್ಷೆಯನ್ನು ರದ್ದುಗೊಳಿಸುವುದಾಗಿ ಪ್ರಕಟಿಸಿದೆ.

“ಪರೀಕ್ಷೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು, ಭಾರತ ಸರ್ಕಾರದ ಶಿಕ್ಷಣ ಸಚಿವಾಲಯವು UGC-NET ಜೂನ್ 2024 ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ” ಎಂದು ಶಿಕ್ಷಣ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. “ಹೊಸತಾಗಿ NET ಪರೀಕ್ಷೆಯನ್ನು ನಡೆಸಲಾಗುವುದು. ಈ ಬಗ್ಗೆ ಮಾಹಿತಿಯನ್ನು ಪ್ರತ್ಯೇಕವಾಗಿ ಹಂಚಿಕೊಳ್ಳಲಾಗುವುದು. ಸಮಗ್ರ ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗುತ್ತಿದೆ” ಎಂದು ಸಚಿವಾಲಯ ತಿಳಿಸಿದೆ.

ದೇಶದ 317 ನಗರಗಳಲ್ಲಿ 11.21 ಲಕ್ಷಕ್ಕೂ ಹೆಚ್ಚು ನೋಂದಾಯಿತ ಅಭ್ಯರ್ಥಿಗಳಲ್ಲಿ ಸುಮಾರು ಶೇ.81ರಷ್ಟು ಅಭ್ಯರ್ಥಿಗಳು NET ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಯುಜಿಸಿ ಅಧ್ಯಕ್ಷ ಎಂ ಜಗದೇಶ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ 1,400 ಕೋಟಿ ರೂ. ಹೂಡಿಕೆ‌ಗೆ ಮುಂದಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್‌..!

 

 

 

 

 

Leave a Comment

DG Ad

RELATED LATEST NEWS

Top Headlines

ಮೋಷನ್ ಪೋಸ್ಟರ್​​ನಲ್ಲೇ ಮೋಡಿ ಮಾಡಿದ “ರಾಜು ಜೇಮ್ಸ್ ಬಾಂಡ್” – ಡಿ.27ಕ್ಕೆ ಸಿನಿಮಾ ತೆರೆಗೆ..!

ದೀಪಕ್ ಮಧುವನಹಳ್ಳಿ ನಿರ್ದೇಶನದ “ರಾಜು ಜೇಮ್ಸ್ ಬಾಂಡ್” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಕರ್ಮ ಬ್ರೋಸ್ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ “ಫಸ್ಟ್ ರ‍್ಯಾಂಕ್

Live Cricket

Add Your Heading Text Here