ಮೂಡಿಗೆರೆ : ಅನ್ಯ ಕೋಮಿನ ಯುವಕನ ಮೇಲೆ ಹತ್ತಾರು ಪುಂಡರ ಗುಂಪು ಹಲ್ಲೆ ಮಾಡಿ ಹಿಗ್ಗಾಮುಗ್ಗಾ ಥಳಿಸಿ ಪೊಲೀಸ್ ನೈತಿಕಗಿರಿ ಪ್ರದರ್ಶಿಸಿದ್ದಾರೆ.
ಯುವತಿಗೆ ಡೈರಿ ಮಿಲ್ಕ್ ಕೊಡುತ್ತಿದ್ದ ಎಂಬ ಕಾರಣಕ್ಕೆ ಬಣಕಲ್ ಮೂಲದ ಯುವಕನಿಗೆ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಲಾಗಿದೆ. ಮಂಗಳವಾರ ಸಂಜೆ ಸಮಯದಲ್ಲಿ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಅನ್ಯ ಕೋಮಿನ ಯುವಕ ಯುವತಿಗೆ ಡೈರಿ ಮಿಲ್ಕ್ ಕೊಡುವಾಗ ಕಾರಿನಲ್ಲಿ ಬಂದ ಯುವಕರ ತಂಡದಿಂದ ಯುವಕನ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ್ದಾರೆ.
ಈ ವೇಳೆ ಬಸ್ ನಿಲ್ದಾಣ ನಿಯಂತ್ರಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಆಗಮಿಸಿದ ಪಿಎಸೈ ಮತ್ತು ಸಿಬ್ಬಂದಿ ಮುಂದಾಗುವ ಅನಾಹುತ ತಪ್ಪಿಸಿ ಗಾಯಗೊಂಡ ಯುವಕರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲದೇ ಹಲ್ಲೆ ನಡೆಸಿ ತಪ್ಪಿಸಿಕೊಂಡ ಪುಂಡರಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಘಟನೆ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಈ ನಡುವೆ ಮೂಡಿಗೆರೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ಪುಂಡ ಯುವಕರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸಿದರು.
ಇದನ್ನೂ ಓದಿ : ಹೆತ್ತ ಮಗುವನ್ನೇ ಕೊಂದ ತಾಯಿ ಪ್ರಕರಣ ; ಹಿರಿಯೂರಿನಿಂದ ಬೆಂಗಳೂರಿನತ್ತ ಮೃತದೇಹ..