Download Our App

Follow us

Home » ಜಿಲ್ಲೆ » ಗಣಿ ನಾಡಿನಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಸಿಎಂ ಯೋಗ..!

ಗಣಿ ನಾಡಿನಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಸಿಎಂ ಯೋಗ..!

ಬಳ್ಳಾರಿ : 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ  ಹಿನ್ನೆಲೆಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳ್ಳಾರಿ ಜಿಲ್ಲೆ ಜಿಂದಾಲ್​​ನಲ್ಲಿರುವ ವಿದ್ಯಾನಗರ ಟೌನ್ ಶಿಪ್​​ನಲ್ಲಿ ಯೋಗ ಪ್ರದರ್ಶನ ಮಾಡಿದರು. ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶನ ನೀಡಿದರು.

ಈ ಬಾರಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ವಸ್ತು ವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶವಾಗಿದೆ.

ಇನ್ನು ಯೋಗ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮನುಷ್ಯ ಎಷ್ಟು ವರ್ಷ ಬದುಕುತ್ತಾನೆ ಎಂಬುದು ಮುಖ್ಯವಲ್ಲ. ಎಷ್ಟು ವರ್ಷ ಆರೋಗ್ಯವಾಗಿ ಬದುಕುತ್ತಾನೆ ಎಂಬುದು ಬಹಳ ಮುಖ್ಯ. ಅದಕ್ಕೆ ಯೋಗ ಪ್ರಮುಖವಾದದ್ದು ಎಂದು ತಿಳಿಸಿದ್ದಾರೆ.

ಇನ್ನು ಮನುಷ್ಯನಿಗೆ ತನ್ನ ಮೇಲೆ ಹಿಡಿತ ಇದ್ದಾಗ ಮನಸ್ಸು ನಮ್ಮ ಹಿಡಿತದಲ್ಲಿ ಇರುತ್ತದೆ ಹೊರತು ಮನಸ್ಸಿನ ಹಿಡಿತದಲ್ಲಿ ನಾವು  ಇರಬಾರದು. ನಮ್ಮ ಹಿಡಿತದಲ್ಲಿ ಮನಸ್ಸು ಇದ್ದಾಗ ನಮ್ಮನ್ನು ಕೆಟ್ಟದಾರಿಗೆ, ತಪ್ಪುದಾರಿಗೆ ತೆಗೆದುಕೊಂಡು ಹೋಗುವ ಪ್ರಯತ್ನ ನಡೆಯುದಿಲ್ಲ. ಅದಕೋಸ್ಕರ ನಾವೆಲ್ಲರೂ ಕೂಡ ಯೋಗ ಮಾಡಬೇಕು ಎಂದಿದ್ದಾರೆ.

ಇದೇ ವೇಳೆ ತಮ್ಮ ಯೋಗ ದಿನಾಚರಿಯ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನಂತೂ ಯೋಗ ಕಲಿಯಲು ಪ್ರಯತ್ನ ಮಾಡಿದೆ ಸಾಧ್ಯವಾಗಿಲ್ಲ. ಆದರೆ ಪ್ರತಿದಿನ ವಾಕ್​​​, 40 ನಿಮಿಷಗಳ ಕಾಲ ಟ್ರೆಡ್​​ ಮಿಲ್​​​​ ಮಾಡುತ್ತೀನಿ ಎಂದು ಹೇಳಿದ್ದಾರೆ. ಇನ್ನು ನನಗೆ ಆರೋಗ್ಯ ಸಮಸ್ಯೆ ಇದೆ. ಇದ್ದರಿಂದ ನನಗೆ ಯೋಗ ಅಭ್ಯಾಸ ಮಾಡಲು ಸಾಧ್ಯವಾಗಿಲ್ಲ. ಆದರೆ ನಾನು ನಾಡಿನ ಜನತೆಗೆ ಮನವಿ ಮಾಡುವುದು ಏನೆಂದರೆ ನಿಮ್ಮ ಮನಸ್ಸು ಸ್ವಸ್ಥತೆಯಿಂದ ಇರಬೇಕಾದರೆ ಯೋಗ ಅನಿವಾರ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ : ದರ್ಶನ್​​​ 40 ಲಕ್ಷ ಡೀಲ್​​​​ಗೆ ದೊಡ್ಡ ಟ್ವಿಸ್ಟ್ ​- ಪ್ರಭಾವಿ MLA ಬುಡಕ್ಕೆ ಬರುತ್ತಾ ಈ ಕೇಸ್​?

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here