ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರಗಳ ರಾಶಿಯೇ ಕಂಡಿದೆ ಎಂಬ ವಿಠಲ್ ಗೌಡರ ಹೇಳಿಕೆ ಬಗ್ಗೆ ಬಿಜೆಪಿ ಮೌನವೇಕೆ? – ಪ್ರಿಯಾಂಕ್ ಖರ್ಗೆ ಪ್ರಶ್ನೆ!

ಬೆಂಗಳೂರು : ಧರ್ಮಸ್ಥಳಚಲೋ ಮಾಡಿದ್ದ ಬಿಜೆಪಿಯವರು ಧರ್ಮಸ್ಥಳವನ್ನು ಮರೆತು ಮದ್ದೂರು ಚಲೋ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಧರ್ಮಸ್ಥಳದ ಬಗ್ಗೆ ಏಕಾಏಕಿ ಮೌನಕ್ಕೆ ಜಾರಿರುವುದು ಏಕೆ? ಬಿಜೆಪಿಯವರ ಧರ್ಮರಕ್ಷಣೆಯ ನಾಟಕವು ನಾಲ್ಕು ದಿನದ ಪ್ರದರ್ಶನಕ್ಕೆ ಮಾತ್ರ ಸೀಮಿತವೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಡಿದ್ದು, ಸೌಜನ್ಯ ಸಂಬಂಧಿ ವಿಠಲ್ ಗೌಡರವರು ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರಗಳ ರಾಶಿಯೇ ಕಂಡಿದೆ ಎಂಬ ಅಘಾತಕಾರಿ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ಆ ಸ್ಥಳವು ಅಕ್ಷರಶಃ ಯುದ್ಧಕಣದಂತೆ ಭಾಸವಾಗುತ್ತದೆ ಎಂದು ವರದಿಗಳು ಹೇಳುತ್ತವೆ ಎಂದು ಉಲ್ಲೇಖಿಸಿದ್ದಾರೆ.

ಸೌಜನ್ಯರ ಮನೆಗೆ ಭೇಟಿ ನೀಡಿದ್ದ ಬಿಜೆಪಿಯವರು ಆ ಕುಟುಂಬದವರ ಹೇಳಿಕೆಯ ಬಗ್ಗೆ ಏನು ಹೇಳುತ್ತಾರೆ? ವಿಠಲ್ ಗೌಡರ ಹೇಳಿಕೆಯ ಬಗ್ಗೆ ಬಿಜೆಪಿಯವರ ಮೌನವೇಕೆ? ಬಿಜೆಪಿ ನಾಯಕರು ತಾವು ಸೌಜನ್ಯ ಕುಟುಂಬದವರ ಪರವೋ ಅಥವಾ ಅವರು ಆರೋಪಿಸುತ್ತಿರುವವರ ಪರವೋ ಎಂಬುದನ್ನು ಸ್ಪಷ್ಟಪಡಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಫೇಕ್ ಕೇಸ್.. ಲಕ್ಷ ಲಕ್ಷ ಹಣಕ್ಕೆ ಡಿಮ್ಯಾಂಡ್ – ಕೊಡಿಗೇಹಳ್ಳಿ ಇನ್ಸ್​ಪೆಕ್ಟರ್ ಮುತ್ತುರಾಜ್​ನ ರೋಲ್ಕಾಲ್ ಕಹಾನಿ ಬಟಾಬಯಲು!

Btv Kannada
Author: Btv Kannada

Read More