ಏಷ್ಯಾಕಪ್‌ನಲ್ಲಿ ಇಂದು ಭಾರತ- ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ ನಡೆಯಲಿದೆ. 26 ಭಾರತೀಯರ ನೆತ್ತರು ಹರಿಸಿದ ಪಹಲ್ಗಾಂ ದುರಂತ ಬಳಿಕ ಮೊದಲ ಬಾರಿ ಭಾರತ- ಪಾಕಿಸ್ತಾನ ಮುಖಾಮುಖಿಯಾಗಲಿದ್ದು, ಈ ಪಂದ್ಯಕ್ಕೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಭಾರತ- ಪಾಕಿಸ್ತಾನ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಟೀಂ ಇಂಡಿಯಾ ಕಣಕ್ಕೆ ಇಳಿಯಲಿದ್ದು, ಸಲ್ಮಾನ್ ಆಖಾ ನೇತೃತ್ವದಲ್ಲಿ ಪಾಕಿಸ್ತಾನ ತಂಡ ಅಖಾಡಕ್ಕೆ ಸಜ್ಜಾಗಿದೆ. ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳು ತಮ್ಮ ಮೊದಲ ಪಂದ್ಯಗಳನ್ನು ಗೆದ್ದಿರುವ ಕಾರಣ ಇಂದಿನ ಪಂದ್ಯ ರೋಚಕತೆ ಸೃಷ್ಟಿಸಿದೆ.
ಏಷ್ಯಾಕಪ್ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಇದುವರೆಗೆ ಒಟ್ಟು 19 ಪಂದ್ಯಗಳು ನಡೆದಿವೆ. ಈ ಪೈಕಿ ಭಾರತ 10 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ 6 ಪಂದ್ಯಗಳನ್ನು ಗೆದ್ದಿದೆ. ಆದರೆ 3 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ. ಟಿ20 ಏಷ್ಯಾಕಪ್‌ನಲ್ಲಿ ಎರಡೂ ತಂಡಗಳು 3 ಬಾರಿ ಮುಖಾಮುಖಿಯಾಗಿವೆ, ಇದರಲ್ಲಿ ಭಾರತ 2 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಕೇವಲ 1 ಪಂದ್ಯವನ್ನು ಗೆದ್ದಿದೆ.

ಪಂದ್ಯಕ್ಕೆ ದೇಶಾದ್ಯಂತ ಭಾರೀ ಆಕ್ರೋಶ : ಭಾರತ – ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ವಿಪಕ್ಷ ನಾಯಕರು, ದೇಶದ ಕೋಟಿ ಕೋಟಿ ಜನರಿಂದ ಬಹಿಷ್ಕಾರದ ಕಿಡಿ ಎದ್ದಿದ್ದು, ಉಗ್ರ ಪೋಷಕವಾಗಿರುವ ಪಾಕಿಸ್ತಾನದ ಜೊತೆ ಕ್ರಿಕೆಟ್ ಬೇಕಾ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಗುಂಡು ಹೊಡೆದ್ರೂ ಅದೆಲ್ಲಾ ಮರೆತು ಕ್ರಿಕೆಟ್ ನೆಪದಲ್ಲಿ ಸ್ನೇಹದ ಕೈಚಾಚಬೇಕಾ? ಆಪರೇಷನ್ ಸಿಂಧೂರ, ಪಹಲ್ಗಾಮ್‍ನಲ್ಲಿ ಹರಿದ ಭಾರತೀಯರ ನೆತ್ತರು ಮರೀಬೇಕಾ ? ಭಾರತೀಯರ ನೆತ್ತರ ಪ್ರತೀಕಾರ ಎಲ್ಲವೂ ಹುಸಿಯಾಗಿಯೇ ಬಿಡ್ತಾ ಎಂದು ಜನ ಕಿಡಿ ಕಾರಿದ್ದಾರೆ.
ಇದನ್ನೂ ಓದಿ : ಕುರುಬ ಸಮುದಾಯವನ್ನು ST ಸಮುದಾಯಕ್ಕೆ ಸೇರ್ಪಡೆ ಮಾಡುವ ಬಗ್ಗೆ ಮಹತ್ವದ ಸಭೆ!
Author: Btv Kannada
Post Views: 388







