Download Our App

Follow us

Home » ಅಪರಾಧ » ಸಲಿಂಗ ಕಾಮದ ಆರೋಪ – ರೇವಣ್ಣ ಎರಡನೇ ಪುತ್ರ ಸೂರಜ್​ ರೇವಣ್ಣ ಅರೆಸ್ಟ್..!

ಸಲಿಂಗ ಕಾಮದ ಆರೋಪ – ರೇವಣ್ಣ ಎರಡನೇ ಪುತ್ರ ಸೂರಜ್​ ರೇವಣ್ಣ ಅರೆಸ್ಟ್..!

ಬೆಂಗಳೂರು : ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್‌.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ಬಂಧನವಾಗಿದೆ. ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಜ್ವಲ್‌ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಅವರನ್ನು ಹಾಸನದ ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.

ಸೂರಜ್‌ ರೇವಣ್ಣ ತನ್ನ ಮೇಲೆ ಆರೋಪ ಮಾಡಿದ್ದ ವ್ಯಕ್ತಿ ವಿರುದ್ಧ ದೂರು ನೀಡಲು ಹಾಸನದ CEN ಠಾಣೆಗೆ ಬಂದಾಗಲೇ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೂರಜ್​ ವಿರುದ್ದ FIR ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸಂಜೆ 6 ಗಂಟೆಯಿಂದ ರಾತ್ರಿ 11.30ರವರೆಗೂ ಸೂರಜ್​ ವಿಚಾರಣೆ ಮಾಡಿ, ಬಳಿಕ ಮಿಡ್​ನೈಟ್​ನಲ್ಲಿ 1.30ರ ಸುಮಾರಿಗೆ ಪೊಲೀಸರು ನಿಗೂಢ ಸ್ಥಳಕ್ಕೆ ಸೂರಜ್‌ ರೇವಣ್ಣನ್ನು ಕರೆದೊಯ್ದಿದ್ದು ಅಲ್ಲಿಯೂ ವಿಚಾರಣೆ ನಡೆಸಿ, ನಂತರ ​ಬಂಧಿಸಿದ್ದಾರೆ.

ಇನ್ನು ಸಂತ್ರಸ್ತ ನೀಡಿದ ದೂರಿನ ಮೇರೆಗೆ ಆತನನ್ನು ಪೊಲೀಸರು ಮೆಡಿಕಲ್​ ಚೆಕಪ್​ಗೆ ಒಳಪಡಿಸಿದ್ದಾರೆ. ತಡರಾತ್ರಿ ಸಂತ್ರಸ್ತನನ್ನ ಪೊಲೀಸರು ಬೆಂಗಳೂರಿಗೆ ಕರೆತಂದು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಬಿಪಿ, ಶುಗರ್, ಇಸಿಜಿ ಮಾಡಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ಮೇಲೆ ಸಂತ್ರಸ್ತನ ದೇಹದ ಮೇಲೆ ಕಚ್ಚಿದ ಕಲೆಗಳ ಪತ್ತೆಯಾಗಿವೆ. ಸದ್ಯ ಪ್ರಕರಣ ಆಲಿಸಿದ ಪೊಲೀಸರು ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮೇರೆಗೆ ಸೂರಜ್​ ರೇವಣ್ಣ ಅವರನ್ನು ಅರೆಸ್ಟ್​ ಮಾಡಿದ್ದಾರೆ. ಸದ್ಯ ಈ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದಾರೆ.

ಏನಿದು ಪ್ರಕರಣ? ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್‌ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಈ ಬಗ್ಗೆ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ. ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಉದ್ಯೋಗಿಯಾದ ಜೆಡಿಎಸ್ ಕಾರ್ಯಕರ್ತ, ಜೂನ್ 16ರಂದು ಸೂರಜ್ ತನಗೆ ವಾಟ್ಸ್‌ಆ್ಯಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದರು. ಉದ್ಯೋಗ ನೀಡುವ ಭರವಸೆ ನೀಡಿ ತನ್ನನ್ನು ಕರೆಸಿಕೊಂಡು, ಸಲಿಂಗಕಾಮಕ್ಕೆ ಒತ್ತಾಯಿಸಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದರಿಂದ ನನ್ನ ದೇಹದ ಮೇಲೆ ಗಾಯಗಳಾಗಿದ್ದು, ಈ ಬಗ್ಗೆ ಎಲ್ಲಾದರೂ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.

ಪ್ರತಿ ದೂರು : ಇತ್ತ ಸಂತ್ರಸ್ತ ದೂರು ದಾಖಲಿಸುತ್ತಿದ್ದಂತೆ ಅವರ ವಿರುದ್ಧವೇ ಎಫ್‌ಐಆರ್‌ ದಾಖಲಿಸಲಾಗಿದೆ. ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸೂರಜ್ ರೇವಣ್ಣ ವಿರುದ್ಧ ದೂರುದಾರ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದ. ಐದು ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಬಗ್ಗೆ ಉಲ್ಲೇಖಿಸಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ದೂರು ಸಲ್ಲಿಕೆ ಮಾಡಿದ್ದರಿಂದ ಐಪಿಸಿ ಸೆಕ್ಸೆನ್ 384, 506 ರ ಅಡಿಯಲ್ಲಿ 168/2024 ರಡಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ : ಯುವ ಡಿವೋರ್ಸ್​ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ​: ನನ್ನಿಂದ ತಪ್ಪಾಯ್ತು, ಸಪ್ತಮಿಗೌಡ ಆಡಿಯೋ ಮಹಾ ಸ್ಫೋಟ..!

 

 

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here